ಬಹುಭಾಷಾ ನಟ ಶರತ್‌ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಬಹುಭಾಷಾ ನಟ ಶರತ್‌ಕುಮಾರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ತಕ್ಷಣವೇ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

68ನೇ ವರ್ಷ ವಯಸ್ಸಿನ ನಟ ಶರತ್‌ಕುಮಾರ್ ಅವರನ್ನು ಅವರು ಡಯಾರಿಯಾ, ಡಿಹೈಡ್ರೇಷನ್‌ನಿಂದ ಬಳಲುತ್ತಿದ್ದು, ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಯಲ್ಲಿ ಭಾನುವಾರ (ಡಿ.11) ಆಸ್ಪತ್ರೆಗೆ ದಾಖಲಿಸಲಾಗಿದೆ.
ಶರತ್‌ಕುಮಾರ್ ಅವರ ಪತ್ನಿ ರಾಧಿಕಾ ಶರತ್ ಕುಮಾರ್ ಮತ್ತು ಪುತ್ರಿ ವರಲಕ್ಷ್ಮೀ ಅವರು ಈಗಾಗಲೇ ಆಸ್ಪತ್ರೆಗೆ ಆಗಮಿಸಿದ್ದಾರೆ.

ಸದ್ಯ ಶರತ್ ಕುಮಾರ್ ಅವರ ಆರೋಗ್ಯ ಸ್ಥಿತಿಯ ಕುರಿತು ಅವರ ಕುಟುಂಬದವರು ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ. ಅತ್ತ ಆಸ್ಪತ್ರೆ ಕಡೆಯಿಂದಲೂ ಯಾವುದೇ ಹೆಲ್ತ್ ಬುಲೆಟಿನ್ ಕೂಡ ರಿಲೀಸ್ ಆಗಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!