ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 14 ವರ್ಷದ ಸಿಂಹ ಬಹು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದೆ.
14 ವರ್ಷದ ರಾಮನಿಗೆ ಅನಾರೋಗ್ಯ ಕಾಡಿದ್ದು, ಪಶುವೈದ್ಯರು ಚಿಕಿತ್ಸೆ ನೀಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಿಂಹ ಮೃತಪಟ್ಟಿದೆ.
ಸಿಂಹ ಯಾವ ಆಹಾರ ನೀಡಿದರೂ ವಾಂತಿ ಮಾಡಿಕೊಂಡಿತ್ತು. ತಕ್ಷಣವೇ ಪಶುವೈದ್ಯರನ್ನು ಕರೆಸಿ ಪರೀಕ್ಷೆ ಮಾಡಿಸಲಾಗಿತ್ತು. ಬಹು ಅಂಗಾಂಗ ವೈಫಲ್ಯದಿಂದ ಸಿಂಹ ಮೃತಪಟ್ಟಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.