ಮುಂಬೈ ದಾಳಿಯ ಮಾಸ್ಟರ್‌ ಮೈಂಡ್‌ ಅಬ್ದುಲ್ ರಹಮಾನ್ ಮಕ್ಕಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಸೋದರ ಮಾವ ಮತ್ತು ನಿಷೇಧಿತ ಜಮಾತ್-ಉದ್-ದವಾ ಉಪ ಮುಖ್ಯಸ್ಥ ಹಫೀಜ್ ಅಬ್ದುಲ್ ರಹಮಾನ್ ಮಕ್ಕಿ ಶುಕ್ರವಾರ ಲಾಹೋರ್‌ನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾನೆ.

ಕಳೆದ ಕೆಲವು ದಿನಗಳಿಂದ ಮಧುಮೇಹ, ಅನಾರೋಗ್ಯದಿಂದ ಬಳಲುತ್ತಿದ್ದ ಅಬ್ದುಲ್ ರಹಮಾನ್ ಮಕ್ಕಿ ಲಾಹೋರ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಇಂದು ಮುಂಜಾನೆ ಮಕ್ಕಿ ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.

ಭಯೋತ್ಪಾದನಾ ಕೃತ್ಯಗಳಿಗೆ ಹಣಕಾಸಿನ ನೆರವು ಒದಗಿಸುತ್ತಿದ್ದ ಈತನಿಗೆ 2020 ರಲ್ಲಿ ಭಯೋತ್ಪಾದನೆ ನಿಗ್ರಹ ನ್ಯಾಯಾಲಯವು ಆರು ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!