ಹೊಸದಿಗಂತ ಡಿಜಿಟಲ್ ಡೆಸ್ಕ್:
ತಿಲಕ್ ವರ್ಮಾ (59) ನಮನ್ ಧೀರ್ (38), ಸೂರ್ಯಕುಮಾರ್ ಯಾದವ್ (40), ರಯಾನ್ ರಿಕಲ್ಟನ್(41) ಅಬ್ಬರದ ಬ್ಯಾಟಿಂಗ್ ನೆರವಿನಿಂದ ದೆಹಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 205 ರನ್ಗಳಿಸಿದೆ.
ಟಾಸ್ ಸೋತು ಬ್ಯಾಟಿಂಗ್ ಇಳಿದ ಮುಂಬೈ ಇಂಡಿಯನ್ಸ್ ತಂಡಕ್ಕೆ ರೋಹಿತ್ ಶರ್ಮಾ ಮತ್ತು ರಯಾನ್ ರಿಕಲ್ಟನ್ ಉತ್ತಮ ಆರಂಭ ನೀಡಿದರು. ಇವರಿಬ್ಬರ ನಡುವೆ ಮೊದಲ ವಿಕೆಟ್ಗೆ 47 ರನ್ಗಳ ಜೊತೆಯಾಟ ನೀಡಿದರು. ರೋಹಿತ್ 12 ಎಸೆತಗಳಲ್ಲಿ 18 ರನ್ ಗಳಿಸಿ ಔಟಾಗುವ ಮೂಲಕ ಮತ್ತೆ ನಿರಾಶೆ ಮೂಡಿಸಿದರು.
ಆದರೆ ರಯಾನ್ ರಿಕಲ್ಟನ್ 25 ಎಸೆತಗಳಲ್ಲಿ 41 ರನ್ ಗಳಿಸಿ ಔಟಾದರು. ಸೂರ್ಯಕುಮಾರ್ ಯಾದವ್ 28 ಎಸೆತಗಳಲ್ಲಿ 40 ರನ್ ಗಳಿಸಿದರು. ತಿಲಕ್ ವರ್ಮಾ 33 ಎಸೆತಗಳಲ್ಲಿ 6 ಬೌಂಡಿರಿ, 3 ಸಿಕ್ಸರ್ಗಗಳ ನೆರವಿನಿಂದ 59ರನ್ಗಳಿಸಿದರೆ, ಕೊನೆಯಲ್ಲಿ ಅಬ್ಬರಿಸಿದ ನಮನ್ ಧೀರ್ 17 ಎಸೆತಗಳಲ್ಲಿ 3 ಬೌಂಡರಿ, 2 ಸಿಕ್ಸ್ ಸಹಿತ ಅಜೇಯ 38 ರನ್ಗಳಿಸಿದರು. ನಾಯಕ ಹಾರ್ದಿಕ್ ಪಾಂಡ್ಯ 2ರನ್ಗಳಿಸಿ ಔಟ್ ಆಗುವ ಮೂಲಕ ನಿರಾಶೆಯನುಭವಿಸಿದರು.