ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ಟೂರ್ನಿಯಲ್ಲಿ ಸತತ ಸೋಲಿನಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್ ತಂಡವು ಕೊನೆಗೂ ಪಂಜಾಬ್ ವಿರುದ್ಧ ಗೆಲುವು ಸಾಧಿಸಿದೆ. ಆದರೆ ಐದು ಬಾರಿಯ ಚಾಂಪಿಯನ್ ಮುಂಬೈ ತಂಡ ಪಾಯಿಂಟ್ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದ್ದು, ಹೀಗಾಗಿ ಪ್ಲೇಆಫ್ ರೇಸ್ನಿಂದ ಹೊರಬಿದ್ದಿದೆ.
ಇತ್ತ ಪ್ಲೇಆಫ್ ರೇಸ್ ನಿಂದ ಹೊರಬಿದ್ದ ಮುಂಬೈಗೆ ಫೇರ್ ಪ್ಲೇ ಅವಾರ್ಡ್ ಪಡೆಯುವ ಅವಕಾಶವಿತ್ತು. ಆದರೆ ಇದೀಗ ಅದಕ್ಕೂ ಕುತ್ತು ಬಂದಿದೆ. ಇದಕ್ಕೆ ಕಾರಣ ಬ್ಯಾಟಿಂಗ್ ಕೋಚ್ ಕೀರನ್ ಪೊಲಾರ್ಡ್.
ಪಂಜಾಬ್ ಕಿಂಗ್ಸ್ ವಿರುದ್ದದ ಪಂದ್ಯದ ವೇಳೆ ಮುಂಬೈ ತಂಡದ ಬ್ಯಾಟಿಂಗ್ ಕೋಚ್ ಕೀರನ್ ಪೊಲಾರ್ಡ್ ನಾಲ್ಕನೇ ಅಂಪೈರ್ ಜೊತೆ ವಾಗ್ವಾದ ನಡೆಸಿದ್ದು, ಅವಾಚ್ಯ ಶಬ್ದ ಬಳಕೆ ಮಾಡಿದ್ದಾರೆ ಎಂಬ ಆರೋಪವಿದೆ. ಹೀಗಾಗಿ ಪೊಲಾರ್ಡ್ ಗೆ ಬಿಸಿಸಿಐ ಪಂದ್ಯ ಶುಲ್ಕ ಶೇ. 15 ರಷ್ಟು ಮೊತ್ತವನ್ನು ದಂಡವಾಗಿ ವಿಧಿಸಿದೆ.
ಪಂಜಾಬ್ ನಡುವಿನ ಪಂದ್ಯದ ವೇಳೆ ಮುಂಬೈ ತಂಡ ಬ್ಯಾಟಿಂಗ್ ವೇಳೆ 19 ನೇ ಓವರ್‌ನಲ್ಲಿ ಪೊಲಾರ್ಡ್ ಅವಾಚ್ಯ ಭಾಷೆ ಬಳಸಿದ್ದಾರೆ ಎಂದು ಆರೋಪ ಕೇಳಿಬಂದಿದೆ. ಈ ಕಾರಣ, ಬಿಸಿಸಿಐ ಪಂದ್ಯ ಶುಲ್ಕದ ಶೇಕಡಾ 15 ರಷ್ಟು ಕಡಿತಗೊಳಿಸಿದೆ. ಇದರ ಜೊತೆಗೆ, ಪೊಲಾರ್ಡ್‌ಗೆ 1 ಡಿಮೆರಿಟ್ ಪಾಯಿಂಟ್‌ಗಳನ್ನು ಸಹ ನೀಡಲಾಗಿದೆ .
ಈ ಕುರಿತು ಐಪಿಎಲ್ ಮಂಡಳಿ ಮಾಹಿತಿ ನೀಡಿದ್ದು, ಮುಂಬೈ ಇಂಡಿಯನ್ಸ್ ಬ್ಯಾಟಿಂಗ್ ಕೋಚ್ ಕೀರನ್ ಪೊಲಾರ್ಡ್ ಅವರಿಗೆ ಪಂದ್ಯ ಶುಲ್ಕದ ಶೇಕಡಾ 15 ರಷ್ಟು ದಂಡ ವಿಧಿಸಲಾಗಿದೆ. ಜೊತೆಗೆ ಐಪಿಎಲ್ ನೀತಿ ಸಂಹಿತೆಯ ಲೆವೆಲ್ 1 ಅನ್ನು ಉಲ್ಲಂಘಿಸಿದ್ದಕ್ಕೆ ಒಂದು ಡಿಮೆರಿಟ್ ಪಾಯಿಂಟ್ ಕೂಡ ನೀಡಲಾಗಿದೆ ತಿಳಿಸಿದೆ .



