ರಾಣಾ ದಂಪತಿಗಳ ವಿರುದ್ಧದ FIR​ ರದ್ದತಿಗೆ ಮುಂಬೈ ಹೈಕೋರ್ಟ್​ ನಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ .

ಹನುಮಾನ್​ ಚಾಲೀಸಾ ವಿವಾದಕ್ಕೆ ಸಂಬಂಧಿಸಿ ಈಗಾಗಲೇ ಬಂಧನಕ್ಕೊಳಗಾಗಿರುವ ರಾಣಾ ದಂಪತಿಗಳ ವಿರುದ್ಧ ದಾಖಲಾಗಿದ್ದ ಎಫ್​ಐಆರ್ ರದ್ದುಗೊಳಿಸುವಂತೆ ಸಲ್ಲಿಕೆ ಮಾಡಿದ್ದ ಅರ್ಜಿ ವಜಾಗೊಂಡಿದೆ.
ತಮ್ಮ ಬಂಧನವನ್ನ ಪ್ರಶ್ನೆ ಮಾಡಿ, ಮುಂಬೈ ಹೈಕೋರ್ಟ್​​ನಲ್ಲಿ ಸಂಸದೆ ನವನೀತ್ ಕೌರ್ ಹಾಗೂ ಅವರ ಪತಿ ಶಾಸಕ ರವಿ ರಾಣಾ ಅರ್ಜಿ​ ಸಲ್ಲಿಕೆ ಮಾಡಿದ್ದರು. ಅದರ ವಿಚಾರಣೆ ನಡೆಸಿದ ಹೈಕೋರ್ಟ್​ ವಜಾಗೊಳಿಸಿದೆ.
ರಾಣಾ ದಂಪತಿಗಳ ಬಂಧನಕ್ಕೆ ಬಂದ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇವರ ವಿರುದ್ಧ ಎಫ್​ಐಆರ್ ದಾಖಲಾಗಿತ್ತು.
ನ್ಯಾಯಾಲಯವು ರಾಣಾ ದಂಪತಿಗೆ ಈಗಾಗಲೇ 14 ದಿನಗಳ ಕಾಲ ಜೈಲು ಶಿಕ್ಷೆ ವಿಧಿಸಿದ್ದು, ನವನೀತ್ ರಾಣಾ ಅವರನ್ನು ಮುಂಬೈನ ಬೈಕುಲ್ಲಾ ಜೈಲಿಗೆ ಮತ್ತು ಅವರ ಪತಿಯನ್ನು ನವಿ ಮುಂಬೈನ ತಲೋಜಾ ಜೈಲಿಗೆ ಕಳುಹಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!