ಮುಂಬೈನ ಪ್ರಮುಖ ಹೊಟೇಲ್‌ಗೆ ಬಾಂಬ್‌ ಬೆದರಿಕೆ ಕರೆ: 5ಕೋಟಿಗೆ ಬೇಡಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮುಂಬೈನ ಪ್ರಮುಖ ಹೋಟೆಲ್‌ಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಅಪರಿಚಿತ ವ್ಯಕ್ತಿಯೊಬ್ಬ ಇಂದು ಹೋಟೆಲ್‌ಗೆ ಕರೆ ಮಾಡಿ, ಹೋಟೆಲ್‌ನಲ್ಲಿ ನಾಲ್ಕು ಕಡೆ ಬಾಂಬ್‌ಗಳನ್ನು ಇಡಲಾಗಿದೆ ಮತ್ತು ಅವುಗಳನ್ನು ನಿಷ್ಕ್ರಿಯಗೊಳಿಸಲು 5 ಕೋಟಿ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದಾನೆ. ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ಹೊಟೇಲ್‌ ಮ್ಯಾನೇಜ್‌ಮೆಂಟ್‌ ದೂರು ದಾಖಲಿಸಿದ್ದಾರೆ.

ಸಹಾರ್ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 336, 507 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!