September 13, 2026
Sunday, September 13, 2026
spot_img

ಸರಣಿ ಸೋಲಿನಿಂದ ಕಂಗೆಟ್ಟ ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ ನಾಯಕತ್ವಕ್ಕೆ ​ಕೊಕ್?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ ನ ಇತಿಹಾಸದಲ್ಲಿ ಅಮೋಘ ಪ್ರದರ್ಶನ ನೀಡುತ್ತಾ ಐದು ಬಾರಿ ಚಾಂಪಿಯನ್ಸ್ ಪಟ್ಟಕ್ಕೇರಿದ ಮುಂಬೈ ಇಂಡಿಯನ್ಸ್ ತಂಡವು ಈ ಬಾರಿ ನೆಲಕಚ್ಚಿದ್ದು, ಅಭಿಮಾನಿಗಳಿಗೆ ಭಾರೀ ನಿರಾಸೆ ಮೂಡಿಸಿದೆ.

ಒಂದು ಕಾಲದಲ್ಲಿ ಗೆಲುವಿನ ಮೇಲೆ ಗೆಲುವು ಸಾಧಿಸುತ್ತಿದ್ದ ಮುಂಬೈ, ಇಂದು ಸತತ ಸೋಲು ಅನುಭವಿಸುತ್ತಿದೆ. ಇದರಿಂದಾಗಿ ನಾಯಕ ಹಾರ್ದಿಕ್ ಪಾಂಡ್ಯ ಮೇಲೆ ದೊಡ್ಡ ಪರಿಣಾಮ ಬೀಳುವ ಲಕ್ಷಣಗಳು ಗೋಚರಿಸುತ್ತಿದೆ.

ಹಾರ್ದಿಕ್ ಪಾಂಡ್ಯ ಈ ಬಾರಿ ಕೇವಲ ನಾಯಕನಾಗಿ ಅಲ್ಲದೆ, ವೈಯಕ್ತಿಕ ಪ್ರದರ್ಶನ ನೀಡುವಲ್ಲಿ ಸಂಪೂರ್ಣ ಎಡವಿದ್ದು, ಮಾಜಿ ಕ್ರಿಕೆಟಿಗರ ಕೆಂಗಣ್ಣಿಗೆ ಗುರಿಯಾಗಿದೆ.

ಐಪಿಎಲ್​ ಅಂಕಪಟ್ಟಿಯಲ್ಲಿ ಕೆಳ ಸ್ಥಾನದಲ್ಲಿರುವ ಮುಂಬೈ, ಅತ್ಯುತ್ತಮ ಬೌಲರ್​ಗಳು ಮತ್ತು ಬ್ಯಾಟರ್​ಗಳನ್ನು ಹೊಂದಿದ್ದರೂ ಕೂಡ ಗೆಲುವಿನ ಲಯಕ್ಕೆ ಮರಳಲು ಪರದಾಡುತ್ತಿರುವುದು ವಿಪರ್ಯಾಸ.

ಹೀಗಾಗಿ ಹಾರ್ದಿಕ್ ಪಾಂಡ್ಯ ಮತ್ತು ತಂಡದ ಕಳಪೆ ಪ್ರದರ್ಶನದ ವಿರುದ್ಧ ಸಾಕಷ್ಟು ಟೀಕೆಗಳು ಎದುರಾಗುತ್ತಿದ್ದು, ಇದರಿಂದ ಮುಂದಿನ ವರ್ಷ ನಾಯಕತ್ವದ ಬಡಾವಣೆ ಜೊತೆಗೆ ಮುಂಬೈ ತಂಡದಲ್ಲಿ ಸಾಕಷ್ಟು ಬದಲಾವಣೆಯಾಗಲಿದೆ ಎಂಬ ಮಾತುಕೇಳಿಬರುತ್ತಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !