IPL | ಇಂದು ಮುಂಬೈ ಇಂಡಿಯನ್ಸ್​ vs ಸನ್​ರೈಸರ್ಸ್​ ಹೈದರಾಬಾದ್​ ಫೈಟ್; ಎಷ್ಟೊತ್ತಿಗೆ ಮ್ಯಾಚ್‌?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಐಪಿಎಲ್​ನ 33ನೇ ಪಂದ್ಯದಲ್ಲಿ ಇಂದು ಮುಂಬೈ ಇಂಡಿಯನ್ಸ್​ ಮತ್ತು ಸನ್​ರೈಸರ್ಸ್​ ಹೈದರಾಬಾದ್​ ತಂಡಗಳು ಮುಖಾಮುಖಿ ಆಗುತ್ತಿವೆ. ಈ ಪಂದ್ಯಕ್ಕೆ ಮುಂಬೈನ ವಾಂಖೆಡೆ ಅಂತಾರಾಷ್ಟ್ರೀಯ ಮೈದಾನ ಆತಿಥ್ಯ ವಹಿಸಿಕೊಳ್ಳುತ್ತಿದೆ. ಪಂದ್ಯ ರಾತ್ರಿ 7.30ಕ್ಕೆ ಆರಂಭವಾಗಲಿದೆ.

 ಹಾರ್ದಿಕ್​ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್​ ತಂಡ ಸಮಾನ್ಯ ಪ್ರದರ್ಶನ ನೀಡುತ್ತಿದೆ. ಈ ವರೆಗೂ ಆಡಿದ 6 ಪಂದ್ಯಗಳಲ್ಲಿ ಕೇವಲ ಎರಡರಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋಲು ಕಂಡಿದೆ. ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ನಡೆದಿದ್ದ ಕೊನೆಯ ಪಂದ್ಯದಲ್ಲಿ 12 ರನ್​ಗಳಿಂದ ಗೆಲುವು ಸಾಧಿಸಿದೆ. ಸದ್ಯ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ.

ಪ್ಯಾಟ್​ ಕಮಿನ್ಸ್​ ನಾಯಕತ್ವದ ಹೈದರಾಬಾದ್​ ತಂಡ ಈವರೆಗೂ ಆಡಿದ 6 ಪಂದ್ಯಗಳ ಪೈಕಿ 2ರಲ್ಲಿ ಗೆದ್ದು 4ರಲ್ಲಿ ಸೋಲು ಅನುಭವಿಸಿದೆ. ಕೊನೆಯ ಪಂದ್ಯದಲ್ಲಿ ಪಂಜಾಬ್​ ಕಿಂಗ್ಸ್​ ವಿರುದ್ಧ 8 ವಿಕೆಟ್​ಗಳಿಂದ ಗೆಲುವು ಸಾಧಿಸಿತ್ತು. ಪಾಯಿಂಟ್ಸ್​ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.

ಎರಡೂ ತಂಡಗಳು ಈವರೆಗೂ 23 ಪಂದ್ಯಗಳಲ್ಲಿ ಎದುರು ಬದುರಾಗಿವೆ. ಈ ವೇಳೆ, ಹೈದರಾಬಾದ್​ 10 ಬಾರಿ ಗೆದ್ದಿದೆ. ಮುಂಬೈ 13 ಪಂದ್ಯಗಳನ್ನು ಜಯಿಸಿದೆ. ಈ ಬಾರಿ ಯಾರು ಗೆಲ್ಲುತ್ತಾರೆ ಎಂದು ಅಭಿಮಾನಿಗಳು ಎದುರು ನೋಡುತ್ತಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!