April 29, 2026
Wednesday, April 29, 2026
spot_img

ಮತ್ತೆ ಗೆಲುವಿನ ಹಳಿ ಏರುತ್ತಾ ಮುಂಬೈ? ಹೈದರಾಬಾದ್ ವಿರುದ್ಧ ಟಾಸ್ ಗೆದ್ದ ಪಾಂಡ್ಯ ಬ್ಯಾಟಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ ನಲ್ಲಿ ಇಂದು ಮುಂಬೈ ಇಂಡಿಯನ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ಹಾರ್ದಿಕ್ ಪಾಂಡ್ಯ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಮುಂಬೈ ಇದುವರೆಗೆ 7 ಪಂದ್ಯಗಳನ್ನಾಡಿದ್ದು, ಕೇವಲ 2 ಪಂದ್ಯಗಳನ್ನು ಗೆದ್ದಿದೆ. ಮತ್ತೊಂದೆಡೆ, ಹೈದರಾಬಾದ್ ಗೆಲುವಿನ ಓಟ ಮುಂದುವರಿಯುತ್ತ ಕಣ್ಣಿಟ್ಟಿದೆ.

ಮುಂಬೈ ಇಂಡಿಯನ್ಸ್: ರಯಾನ್ ರಿಕಲ್ಟನ್ (ವಿಕೆಟ್ ಕೀಪರ್), ವಿಲ್ ಜ್ಯಾಕ್ಸ್, ನಮನ್ ಧೀರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ರಾಬಿನ್ ಮಿಂಜ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ, ಎಎಮ್ ಗಜನ್ಫರ್ ಮತ್ತು ಅಶ್ವನಿ ಕುಮಾರ್.

ಸನ್​ರೈಸರ್ಸ್​ ಹೈದರಾಬಾದ್: ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹೆನ್ರಿಚ್ ಕ್ಲಾಸೆನ್, ಸಲೀಲ್ ಅರೋರಾ, ನಿತೀಶ್ ಕುಮಾರ್ ರೆಡ್ಡಿ, ಪ್ಯಾಟ್ ಕಮ್ಮಿನ್ಸ್ (ನಾಯಕ), ಹರ್ಷ್ ದುಬೆ, ಸಾಕಿಬ್ ಹುಸೇನ್, ಪ್ರಫುಲ್ ಹಿಂಗೆ ಮತ್ತು ಇಶಾನ್ ಮಾಲಿಂಗ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !