ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿಯನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ದಾವೂದ್ ಇಬ್ರಾಹಿಂ ಗ್ಯಾಂಗ್ ಹೆಸರಲ್ಲಿ ವ್ಯಕ್ತಿ ಮುಂಬೈ ಪೊಲೀಸ್ ಕಂಟ್ರೋಲ್ ರೂಂಗೆ ಬೆದರಿಕೆ ಕರೆ ಮಾಡಿದ್ದ. ತಕ್ಷಣ ಎಚ್ಚೆತ್ತ ಪೊಲೀಸರು ಸಿಗ್ನಲ್ ಮೂಲಕ ಆತನನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಬೆಚ್ಚಿಬೀಳಿಸುವ ಸಂಗತಿ ಬಯಲಾಗಿದೆ.
ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿದ ವ್ಯಕ್ತಿ, ನರೇಂದ್ರ ಮೋದಿ ಮತ್ತು ಯುಪಿ ಸಿಎಂ ಯೋಗಿಯವರನ್ನು ಕೊಲ್ಲುವಂತೆ ದಾವೂದ್ ಗ್ಯಾಂಗ್ ತನಗೆ ಸೂಚನೆ ನೀಡಿದ್ದರು ಎಂದು ಹೇಳಿದ್ದಾನೆ. ಅಷ್ಟೇ ಅಲ್ಲದೆ, ಮುಂಬೈನ ಜೆಜೆ ಆಸ್ಪತ್ರೆಗೂ ಬಾಂಬ್ ಬೆದರಿಕೆ ಕರೆ ಮಾಡುವಂತೆ ತಿಳಿಸಲಾಗಿತ್ತು ಎಂಬ ಅಂಶವೂ ಬಹಿರಂಗವಾಗಿದೆ. ಆತನನ್ನು ಬಂಧಿಸಲಾಗಿದ್ದು, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 505 (2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದೇ ವೇಳೆ ಕಳೆದ ಅಕ್ಟೋಬರ್ ನಲ್ಲಿ ಮುಂಬೈ ಪೊಲೀಸರಿಗೆ ಬೆದರಿಕೆ ಮೇಲ್ ಬಂದಿತ್ತು. ಇದರಲ್ಲಿ ಭಾರತ ಸರ್ಕಾರ 500 ಕೋಟಿ ಜೊತೆಗೆ ಲಾರೆನ್ಸ್ ಬಿಷ್ಣೋಯ್ ಅವರನ್ನು ಬಿಡುಗಡೆ ಮಾಡದಿದ್ದರೆ ನರೇಂದ್ರ ಮೋದಿ ಹೆಸರಿನ ಕ್ರೀಡಾಂಗಣವನ್ನು ಸ್ಫೋಟಿಸುವುದಾಗಿ ಬೆದರಿಕೆ ಮೇಲ್ ಕಳುಹಿಸಿದ್ದರು.
ಭಯೋತ್ಪಾದಕರ ಗ್ಯಾಂಗ್ ಈಗಾಗಲೇ ಭಾರತವನ್ನು ಪ್ರವೇಶಿಸಿದ್ದು, ಮುಂಬೈನಲ್ಲಿ ಅನೇಕ ಪ್ರದೇಶಗಳನ್ನು ಸ್ಫೋಟಿಸುವ ಬೆದರಿಕೆ ಹಾಕಿದರು. ಇದರಿಂದ ಎಚ್ಚೆತ್ತ ಪೊಲೀಸ್ ಪಡೆ ಅಕ್ಟೋಬರ್ 7ರಂದು ವ್ಯಕ್ತಿಯನ್ನು ಪತ್ತೆಹಚ್ಚಿ, ಆತನನ್ನು ಗೋರ್ಗಾಂವ್‌ನ ನಾಗೇಂದ್ರ ಶುಕ್ಲಾ ಎಂದು ಪೊಲೀಸರು ಗುರುತಿಸಿದ್ದಾರೆ. ಇದು ಫ್ರಾಂಕ್ ಮೇಲ್ ಆಗಿದ್ದು, ಮದ್ಯದ ಅಮಲಿನಲ್ಲಿ ಈತ ಮೇಲ್ ಮಾಡುತ್ತಿದ್ದ ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.