July 5, 2026
Sunday, July 5, 2026
spot_img

ಮುಂಬೈ ಮಳೆ ಅವಾಂತರ: ಅಂಬಾನಿ ಬೆಂಗಾವಲು ಪಡೆಯ ಮುಂದೆ ಉರುಳಿದ ಮರ, ತಪ್ಪಿದ ಭಾರೀ ಅನಾಹುತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರೀ ಮಳೆಯ ನಡುವೆಯೇ ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಅವರ ಭದ್ರತಾ ಬೆಂಗಾವಲು ಸಾಗುತ್ತಿದ್ದ ವೇಳೆ ಬಾಂದ್ರಾ ಪ್ರದೇಶದಲ್ಲಿ ಬೃಹತ್ ಮರವೊಂದು ರಸ್ತೆಗೆ ಉರುಳಿದ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸದೆ ಅಂಬಾನಿ ಸುರಕ್ಷಿತವಾಗಿ ಪಾರಾಗಿದ್ದಾರೆ.

ಸಂಚಾರಕ್ಕೆ ತಾತ್ಕಾಲಿಕ ಅಡಚಣೆ

ಮರ ರಸ್ತೆ ಮೇಲೆ ಬಿದ್ದ ಪರಿಣಾಮ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಮರವನ್ನು ತೆರವುಗೊಳಿಸಿ ಸಂಚಾರವನ್ನು ಪುನರಾರಂಭಿಸಿದರು.

ನಗರದಲ್ಲಿ ನಿರಂತರ ಮಳೆಯಿಂದ ಹಲವು ಪ್ರದೇಶಗಳಲ್ಲಿ ಮರಗಳು ಹಾಗೂ ಕೊಂಬೆಗಳು ಉರುಳುತ್ತಿರುವ ಘಟನೆಗಳು ವರದಿಯಾಗಿದ್ದು, ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಸಂಚರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !