ಮುಂಬೈ, ರಾಜಸ್ಥಾನ ಮುಖಾಮುಖಿ: ಮೊದಲ ಗೆಲುವಿನ ನಿರೀಕ್ಷೆಯಲ್ಲಿ ಪಾಂಡ್ಯ ಟೀಮ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಐಪಿಎಲ್ ಟೂರ್ನಿಯ 14ನೇ ಪಂದ್ಯದಲ್ಲಿಂದು ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.

ಸತತ ಎರಡು ಪಂದ್ಯಗಳನ್ನು ಸೋತು ಕಂಗಾಲಾಗಿರುವ ಹಾರ್ದಿಕ್ ಪಾಂಡ್ಯ ನೇತೃತ್ವದ ಶತಾಯಗತಾಯ ತವರಿನಲ್ಲಿ ಗೆಲುವಿನ ಲಯಕ್ಕೆ ಮರಳಲು ಎದುರು ನೋಡುತ್ತಿದೆ. ಮುಂಬೈ ಇಂಡಿಯನ್ಸ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಇನ್ನೊಂದೆಡೆ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ ರಾಯಲ್ಸ್ ತಂಡವು ಈ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಭರ್ಜರಿ ಆರಂಭವನ್ನು ಪಡೆದಿದೆ. ಆಡಿದ ಮೊದಲೆರಡು ಪಂದ್ಯಗಳಲ್ಲಿ ಭರ್ಜರಿ ಗೆಲುವು ಸಾಧಿಸಿರುವ ರಾಯಲ್ಸ್ ಪಡೆ ಇದೀಗ ಹ್ಯಾಟ್ರಿಕ್ ಗೆಲುವಿನ ಕನವರಿಕೆಯಲ್ಲಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!