ಮುಂಬೈ- ರಾಜಸ್ಥಾನ ಮುಖಾಮುಖಿ: ಟಾಸ್ ಗೆದ್ದ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ ಇಂದಿನ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಹಾರ್ದಿಕ್ ಪಾಂಡ್ಯ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.

ಮುಂಬೈ ಇಂಡಿಯನ್ಸ್ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದ್ದು, ನೆಹಾಲ್ ವದೇರಾ, ಪೀಯೂಸ್ ಚಾವ್ಲಾ ಹಾಗೂ ನುವಾನ್ ತುಷಾರ ತಂಡ ಕೂಡಿಕೊಂಡಿದ್ದಾರೆ. ಇನ್ನೊಂದೆಡೆ ಆತಿಥೇಯ ರಾಜಸ್ಥಾನ ರಾಯಲ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಕುಲ್ದಿಪ್ ಸೆನ್ ಬದಲಿಗೆ ಸಂದೀಪ್ ಶರ್ಮಾ ತಂಡ ಕೂಡಿಕೊಂಡಿದ್ದಾರೆ.

ಒಂದು ಕಡೆ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ ರಾಯಲ್ಸ್ ತಂಡವು ಆಡಿದ 7 ಪಂದ್ಯಗಳಲ್ಲಿ 6 ಗೆಲುವು ಹಾಗೂ ಒಂದು ಸೋಲು ಸಹಿತ 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇನ್ನೊಂದೆಡೆ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು 7 ಪಂದ್ಯಗಳಲ್ಲಿ 3 ಗೆಲುವು ಹಾಗೂ 4 ಸೋಲುಗಳೊಂದಿಗೆ 6 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.ಡಗಳು

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!