Monday, August 8, 2022

Latest Posts

ಮುಂಬೈನಲ್ಲಿ ಮಹಿಳೆ ಮೇಲೆ ಅತ್ಯಾಚಾರ: ಚಿಕಿತ್ಸೆ ಫಲಕಾರಿಯಾಗದೇ ಸಾವು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಮುಂಬೈನ ಸಾಕಿ ನಾಕಾ ಪ್ರದೇಶದಲ್ಲಿ ಅತ್ಯಾಚಾರಕ್ಕೆ ಒಳಗಾಗಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಸಾಕಿ ನಾಕಾ ಪ್ರದೇಶದಲ್ಲಿ ನಡುರಾತ್ರಿ 30  ವರ್ಷದ ಮಹಿಳೆ ಮೇಲೆ ಕಾಮುಕ ಅತ್ಯಾಚಾರ ಎಸಗಿದ್ದ. ತದನಂತರ ಯುವತಿಯ ಖಾಸಗಿ ಅಂಗಕ್ಕೆ ರಾಡ್ ತುರುಕಿ ವಿಕೃತಿ ಮೆರೆದಿದ್ದ.
ಬೆಳಗಿನ ಜಾವ 3:30 ಕ್ಕೆ ಪೊಲೀಸರಿಗೆ ಕರೆ ಬಂದಿದ್ದು, ಸ್ಥಳಕ್ಕೆ ಪೊಲೀಸರು ಬಂದು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss