ಮುಂಬೈನಲ್ಲಿ ಹೆಚ್ಚಾಯ್ತು ಕೋವಿಡ್‌: ಲಾಕ್‌ ಆಗುತ್ತಾ ವಾಣಿಜ್ಯ ನಗರಿ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ವಾಣಿಜ್ಯ ನಗರಿ ಮುಂಬೈನಲ್ಲಿ ಕೋವಿಡ್‌ ಪ್ರಕರಣಗಳಲ್ಲಿ ಭಾರೀ ಏರಿಕೆಯಾಗುತ್ತಿದೆ. ಗುರುವಾರ 20 ಸಾವಿರಕ್ಕೂ ಅಧಿಕ ಸೋಂಕಿತರು ಪತ್ತೆಯಾಗಿದ್ದು, ಒಂದೇ ದಿನ ಶೇ. 33ರಷ್ಟು ಸೋಂಕು ಹೆಚ್ಚಾಗಿದೆ.
ಮಹಾರಾಷ್ಟ್ರದ್ಯಂತ 36,265 ಸೋಂಕಿತರು ಪತ್ತೆಯಾಗಿದ್ದು, ಮುಂಬೈ ಒಂದರಲ್ಲೇ 20,181 ಸೋಂಕಿತರು ಪತ್ತೆಯಾಗಿದ್ದಾರೆ. ಇವರಲ್ಲಿ 17,154 ಮಂದಿ ಯಾವುದೇ ರೀತಿಯ ರೋಗ ಲಕ್ಷಣಗಳನ್ನು ಹೊಂದಿಲ್ಲ. ಉಳಿದ 1,170 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಹಾಗೂ 106 ಮಂದಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇನ್ನು ಮಹಾರಾಷ್ಟ್ರ ಸರ್ಕಾರ ರಾಜ್ಯದ ಕೋವಿಡ್‌ ಪರಿಸ್ಥಿತಿಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ಈಗಾಗಲೇ ಸಚಿವರು, ಆರೋಗ್ಯಾಧಿಕಾರಿಗಳ ನಡುವೆ ನಭೆ ನಡೆದಿದ್ದು, ಲಾಕ್‌ ಡೌನ್‌ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!