ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಿವಸೇನೆಯ (ಯುಬಿಟಿ) 62 ವರ್ಷದ ಮತಗಟ್ಟೆ ಏಜೆಂಟ್ ಮೇ 20 ರಂದು ಮುಂಬೈನ ವರ್ಲಿ ಪ್ರದೇಶದಲ್ಲಿನ ಮತಗಟ್ಟೆಯ ಶೌಚಾಲಯದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು ಮನೋಹರ್ ನಲ್ಗೆ ಎಂದು ಗುರುತಿಸಲಾಗಿದೆ.
ಪೊಲೀಸರ ಪ್ರಕಾರ, ಸಂಜೆ ಈ ಘಟನೆ ನಡೆದಿದ್ದು, ಮನೋಹರ್ ಶೌಚಾಲಯಕ್ಕೆ ಹೋದಾಗ ಸ್ವಲ್ಪ ಸಮಯದವರೆಗೆ ಹೊರಗೆ ಬರಲಿಲ್ಲ. ಆತನ ಸಹೋದ್ಯೋಗಿಗಳು ಹೋಗಿ ಪರಿಶೀಲಿಸಿದಾಗ ಮನೋಹರ್ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂತು.
ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದರು, ವೈದ್ಯರು ಪರೀಕ್ಷಿಸಿದಾಗ ಅವರು ಮೃತಪಟ್ಟಿರುವುದಾಗಿ ಘೋಷಿಸಿದರು.
ವರ್ಲಿಯಲ್ಲಿ ನಡೆದ ಘಟನೆಯ ಬಗ್ಗೆ ಮಾತನಾಡಿದ ಮುಂಬೈ ಪೊಲೀಸ್ ಅಧಿಕಾರಿಗಳು, ಮನೋಹರ್ ಸಾವಿಗೆ ನಿಜವಾದ ಕಾರಣ ತಿಳಿಯಲು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಮುಂಬೈ ಪೊಲೀಸರು ಮೃತದೇಹವನ್ನು ವಶಪಡಿಸಿಕೊಂಡಿದ್ದಾರೆ ಮತ್ತು ಎನ್‌ಎಂ ಜೋಶಿ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನೂ ದಾಖಲಿಸಲಾಗಿದೆ.