ರಾಜಸ್ಥಾನದ ಬೌಲಿಂಗ್ ಗೆ ಎಡವಿದ ಮುಂಬೈ: ಗೆಲುವಿಗೆ ಸಾಧಾರಣ ಟಾರ್ಗೆಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:
 
ಮುಂಬೈ ಇಂಡಿಯನ್ಸ್ ತಂಡವು 9 ವಿಕೆಟ್ ಕಳೆದುಕೊಂಡು ಕೇವಲ 125 ರನ್‌ ಗಳಿಸಿದೆ. ಈ ಮೂಲಕ ರಾಜಸ್ಥಾನ ರಾಯಲ್ಸ್‌ಗೆ ಸಾಧಾರಣ ಗುರಿ ನೀಡಿದೆ.

ವಾಂಖೇಡೆ ಮೈದಾನದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲಿಳಿದ ಮುಂಬೈ ಇಂಡಿಯನ್ಸ್ ತಂಡಕ್ಕೆ ಮೊದಲ ಓವರ್‌ನಲ್ಲೇ ಟ್ರೆಂಟ್ ಬೌಲ್ಟ್ ಶಾಕ್ ನೀಡಿದರು. ರೋಹಿತ್ ಶರ್ಮಾ ಹಾಗೂ ನಮನ್ ಧೀರ್ ಶೂನ್ಯ ಸುತ್ತಿ ಪೆವಿಲಿಯನ್ ಸೇರಿದರು. ಇನ್ನು ಇದರ ಬೆನ್ನಲ್ಲೆ ಡೆವಾಲ್ಡ್ ಬ್ರೆವೀಸ್‌ ಕೂಡಾ ಟ್ರೆಂಟ್‌ ಬೌಲ್ಟ್‌ಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಪೆರೇಡ್ ನಡೆಸಿದರು. ಇನ್ನು ಇಶಾನ್ ಕಿಶನ್ 16 ರನ್ ಗಳಿಸಿ ನಂದ್ರೆ ಬರ್ಗರ್‌ಗೆ ವಿಕೆಟ್ ಒಪ್ಪಿಸಿದರು.

ಇದಾದ ಬಳಿಕ ತಿಲಕ್ ವರ್ಮಾ ಹಾಗೂ ನಾಯಕ ಹಾರ್ದಿಕ್ ಪಾಂಡ್ಯ 5ನೇ ವಿಕೆಟ್‌ಗೆ 56 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ನಾಯಕ ಹಾರ್ದಿಕ್ ಪಾಂಡ್ಯ 34 ರನ್ ಹಾಗೂ ತಿಲಕ್ ವರ್ಮಾ 34 ರನ್ ಬಾರಿಸಿ ಚಹಲ್‌ಗೆ ವಿಕೆಟ್ ಒಪ್ಪಿಸಿದರು.

ಇನ್ನು ಗೆರಾಲ್ಡ್ ಕೋಟ್ಜಿ 4 ರನ್ ಗಳಿಸಿದರೆ, ಚಾವ್ಲಾ 3 ರನ್ ಗಳಿಸಿ ಆವೇಶ್‌ ಖಾನ್‌ಗೆ ವಿಕೆಟ್ ಒಪ್ಪಿಸಿದರು. ಇನ್ನು ಕೊನೆಯಲ್ಲಿ ಟಿಮ್ ಡೇವಿಡ್ 17 ರನ್ ಬಾರಿಸುವ ಮೂಲಕ ತಂಡದ ಮೊತ್ತವನ್ನು ನೂರರ ಗಡಿ ದಾಟಿಸಿದರು. ಅಂತಿಮವಾಗಿ ಮುಂಬೈ ಇಂಡಿಯನ್ಸ್ 125 ರನ್ ಗಳಿಸಲಷ್ಟೇ ಶಕ್ತವಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!