September 27, 2026
Sunday, September 27, 2026
spot_img

ಕನಕಪುರ ಮಠದ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕನಕಪುರದ ದೇಗುಲ ಮಠದ ಮುಮ್ಮಡಿ ನಿರ್ವಾಣ ಸ್ವಾಮೀಜಿ ವಯೋಸಹಜ ಕಾಯಿಲೆಯಿಂದಾಗಿ ಸೋಮವಾರ ಲಿಂಗೈಕ್ಯರಾಗಿದ್ದಾರೆ.

ಒಂದು ವಾರದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸ್ವಾಮೀಜಿಯವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ನಿನ್ನೆ ಸಂಜೆ ನಾಲ್ಕು ಗಂಟೆ ವೇಳೆಗೆ ಲಿಂಗೈಕ್ಯರಾಗಿದ್ದಾರೆ.

ಹಲವು ದಶಕಗಳ ಕಾಲ ಸಮಾಜಕ್ಕೆ ಸತ್ಕಾರ್ಯಗಳ ಮೂಲಕ ಸೇವೆ ಸಲ್ಲಿಸಿ ಜನಾನುರಾಗಿಗಳಾಗಿದ್ದ ಶ್ರೀಗಳ ನಿಧನಕ್ಕೆ ಭಕ್ತ ಸಮೂಹ ಕಂಬನಿ ಮಿಡಿದಿದೆ. ಶ್ರೀಗಳ ಅಂತಿಮ ದರುಶನ ಪಡೆಯಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕನಕಪುರ ದೇಗುಲ ಮಠಕ್ಕೆ ಇಂದು ಬೆಳಗ್ಗೆ 10 ಗಂಟೆಗೆ ಭೇಟಿ ನೀಡಲಿದ್ದಾರೆ.

Must Read