Thursday, February 25, 2021

Latest Posts

ಪುರಸಭಾ ಅಧಿಕಾರಿಗಳ ಕಿರುಕುಳ: ಡೆತ್‌ನೋಟ್ ಬರೆದಿಟ್ಟು ಪೌರಕಾರ್ಮಿಕ ನೇಣಿಗೆ ಶರಣು

ಹೊಸದಿಗಂತ ವರದಿ, ಮದ್ದೂರು:

ಅಧಿಕಾರಿಗಳ ಕಿರುಕುಳದಿಂದ ಬೇಸತ್ತ ಪೌರಕಾರ್ಮಿಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಪುರಸಭಾ ಪೌರ ಕಾರ್ಮಿಕ ನಾರಾಯಣ ಎಂಬಾತನೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವನಾಗಿದ್ದಾನೆ.

ಇತ್ತೀಚೆಗೆ ಪಟ್ಟಣದಲ್ಲಿ ಮ್ಯಾನ್‌ಹೋಲ್‌ಗೆ ನಾರಾಯಣನನ್ನು ಇಳಿಸಿ ಅಧಿಕಾರಿಗಳು ಸ್ವಚ್ಚತೆ ಕೆಲಸ ಮಾಡಿಸಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತುಘಿ. ಇದರಿಂದ ಎಚ್ಚೆತ್ತ ಪುರಸಭಾ ಅಧಿಕಾರಿಗಳು ನಾನೇ ಸ್ವತಃ ಮ್ಯಾನ್‌ಹೋಲ್‌ಗೆ ಇಳಿದು ಸ್ವಚ್ಚತೆ ನಡೆಸಿದ್ದಾಗಿ ಪತ್ರ ಬರೆದುಕೊಡುವಂತೆ ಒತ್ತಾಯಿಸಿದ್ದಾರೆ.

ಇದನ್ನು ಒಪ್ಪದಿದ್ದಾಗ ನಿತ್ಯ ಕರ್ತವ್ಯಕ್ಕೆ ಹಾಜರಾದರೂ ಗೈರು ಎಂದು ಹಾಜರಾತಿ ಪುಸ್ತಕದಲ್ಲಿ ನಮೂದಿಸುತ್ತಿದ್ದರೆನ್ನಲಾಗಿದೆ. ಇದರಿಂದ ಬೇಸತ್ತ ನಾರಾಯಣ ಡೆತ್‌ನೋಟ್ ಬರೆದಿಟ್ಟು, ನನ್ನ ಸಾವಿಗೆ ಪುರಸಭಾ ಮುಖ್ಯಾಧಿಕಾರಿ ಮುರುಗೇಶ್, ಪರಿಸರ ಇಂಜಿನಿಯರ್ ಝಾಸಿಂಖಾನ್ ಇತರರು ಕಾರಣ ಎಂದು ಬರೆದು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಈ ಸಂಬಂಧ ಮದ್ದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದುಘಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಪುರಸಭಾ ಅಧಿಕಾರಿಗಳ ವಜಾಕ್ಕೆ ಒತ್ತಾಯ: ಬಲವಂತವಾಗಿ ಮ್ಯಾನ್ ಹೋಲ್ ಗಿಳಿಸಿ ಮಲ ಸ್ವಚ್ಚಗೊಳಿಸಿದ್ದ ಪ್ರಕರಣದಲ್ಲಿ ಬಲಿಪಶುವಾಗಿದ್ದ ಮದೂರಿನ ಪೌರಕಾರ್ಮಿಕ ನಾರಾಯಣ ಪುರಸಭೆ ಅಧಿಕಾರಿಗಳ ಕಿರುಕುಳ ತಾಳಲಾರದೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದು, ಇದಕ್ಕೆ ಪುರಸಭೆಯ ಮುಖ್ಯಾಧಿಕಾರಿ ಮುರುಗೇಶ್, ಆರೋಗ್ಯ ನಿರೀಕ್ಷಕ ಝಾಸಿಂಖಾನ್ ಹಾಗೂ ಪರಿಸರ ಅಭಿಯಂತರ ನಾಗೇಂದ್ರ ಅವರೇ ಕಾರಣರಾಗಿದ್ದುಘಿ, ತಕ್ಷಣ ಅವರನ್ನು ಸೇವೆಯಿಂದ ವಜಾಗೊಳಿಸಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಕರ್ನಾಟಕ ರಾಜ್ಯ ಸಾಯಿ ಕರ್ಮಚಾರಿ ಪರಿಷತ್ ರಾಜ್ಯ ಸಮಿತಿ ನಿರ್ದೇಶಕ ಎಸ್.ಕೆ. ಆರ್ಮುಗಂ ಕಿಶೋರ್ ಒತ್ತಾಯಿಸಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss

error: Content is protected !!