ಮುಂಡಗೋಡ: ನಿರ್ಮಾಣ ಹಂತದ ಕಟ್ಟಡದಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದು ಯುವಕ ಸಾ*ವು

ಹೊಸದಿಗಂತ ವರದಿ ಮುಂಡಗೋಡ: ತಾಲೂಕಿನ ಟಿಬೆಟಿಯನ್ ಕಾಲೋನಿಯ ಲಾಮಾ ಕ್ಯಾಂಪ್ ನಂ.1ರಲ್ಲಿ ನಿರ್ಮಾಣ ಹಂತದಲ್ಲಿದ್ದ ನಾಲ್ಕು ಅಂತಸ್ತಿನ ಕಟ್ಟಡದಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದು ಯುವ ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ. ಬಸಾಪುರ ಗ್ರಾಮದ ಸಂದೇಶ ನಾಗರಾಜ ಚಲವಾದಿ (23) ಮೃತ ಯುವಕ. ಕಟ್ಟಡ ಕಾಮಗಾರಿ ವೇಳೆ ನಾಲ್ಕನೇ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಕೆಳಗೆ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತದೇಹವನ್ನು ತಾಲೂಕು ಆಸ್ಪತ್ರೆಗೆ ತರಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. … Continue reading ಮುಂಡಗೋಡ: ನಿರ್ಮಾಣ ಹಂತದ ಕಟ್ಟಡದಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದು ಯುವಕ ಸಾ*ವು