ಹೊಸದಿಗಂತ ವರದಿ ಕಲಬುರಗಿ:
ಕಲಬುರಗಿ ಮಹಾ ನಗರ ಪಾಲಿಕೆಯ ಮೇಯರ್ ,ಉಪ.ಮೇಯರ್ ಚುನಾವಣೆ, ಪಾಲಿಕೆಯಲ್ಲಿ ಬಿಜೆಪಿಗೆ ಜಯಭೇರಿ.
ಅತೀ ಕುತೂಹಲ ಕೆರಳಿಸಿದ್ದ ಇಲ್ಲಿಯ ಕಲಬುರಗಿ ಮಹಾ ನಗರ ಪಾಲಿಕೆಯ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಯಲ್ಲಿ ಕೊನೆಗೂ ಬಿಜೆಪಿ ಜಯಭೇರಿ ಭಾರಿಸುವ ಮೂಲಕ ವಿಜಯದ ನಗೆ ಬೀರಿತು.
ಕಲಬುರಗಿ ಮಹಾ ನಗರ ಪಾಲಿಕೆಯ ನೂತನ ಮಹಾಪೌರರಾಗಿ ವಿಶಾಲ ದಗಿ೯ ಆಯ್ಕೆಗೊಂಡರೆ,ಉಪ ಮಹಾಪೌರರಾಗಿ ಶಿವಾನಂದ ಪಿಸ್ತಿ ಆಯ್ಕೆಯಾಗಿದ್ದಾರೆ.ಇದರಿಂದ ಕಾಂಗ್ರೆಸ್ ಹಿಡಿತದಲ್ಲಿದ್ದ ಪಾಲಿಕೆ ಇದೀಗ 12ವಷ೯ಗಳ ಬಳಿಕ ಬಿಜೆಪಿ ತೆಕ್ಕೆಯಲ್ಲಿ ಬಂದಿದೆ.