ಮಹಾನಗರ ಪಾಲಿಕೆ ಚುನಾವಣೆ ಟಿಕೆಟ್ ಮಾರಾಟ : ಆಪ್ ವಿರುದ್ಧ ಬಿಜೆಪಿ ಆರೋಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯಲ್ಲಿ ನಡೆಯಲಿರುವ ಮಹಾನಗರ ಪಾಲಿಕೆ ಚುನಾವಣೆಗೆ ಟಿಕೆಟ್ ಮಾರಾಟ ಮಾಡಲಾಗಿದೆ ಎಂದು ಆಪ್ ವಿರುದ್ಧ ಬಿಜೆಪಿ ಗಂಭೀರ ಆರೋಪ ಮಾಡಿದೆ.

ಅಭ್ಯರ್ಥಿಗಳನ್ನು ಘೋಷಿಸಲು ಆಪ್ ಪಕ್ಷ ಹಣ ಪಡೆಯುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ ಮಾತನಾಡಿದ್ದು, ಆಮ್ ಆದ್ಮಿ ಪಕ್ಷ ಯಾವಾಗಲೂ ಭ್ರಷ್ಟಾಚಾರದ ವಿರೋಧವಾಗಿ ಮಾತನಾಡುತ್ತಿತ್ತು. ಆದರೆ ಇಡೀ ಪಕ್ಷವೇ ಇಂದು ಸುಲಿಗೆ ಮಾಡುತ್ತಿದೆ. ಇದು ಎಲ್ಲರಿಗೂ ಗೊತ್ತಿದೆ. ಬರೀ ಕಾರ್ಪೋರೇಷನ್ ಅಲ್ಲ, ವಿಧಾನಸಭೆ ಟಿಕೆಟ್ ಕೂಡ ಮಾರಿದ್ದಾರೆ ಎಂದು ಆರೋಪಿಸಿದ್ದಾರೆ.

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!