ಹೊಸದಿಗಂತ ಡಿಜಿಟಲ್ ಡೆಸ್ಕ್:
ಹರಿಯಾಣ ಮಹಾನಗರ ಪಾಲಿಕೆಗಳ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದೆ. 10 ಮೇಯರ್ ಸ್ಥಾನಗಳಲ್ಲಿ 9 ಸ್ಥಾನಗಳನ್ನು ಬಿಜೆಪಿ ಗೆದ್ದಿದೆ.
ಹರಿಯಾಣದಾದ್ಯಂತ ಪಕ್ಷವು ನಗರ ಪ್ರಾಬಲ್ಯವನ್ನು ಪ್ರದರ್ಶಿಸಿತು. ಗುರುಗ್ರಾಮ್, ಹಿಸಾರ್, ಕರ್ನಾಲ್, ರೋಹ್ಟಕ್, ಫರಿದಾಬಾದ್, ಯಮುನಾನಗರ, ಪಾಣಿಪತ್, ಅಂಬಾಲ ಮತ್ತು ಸೋನಿಪತ್‌ಗಳಲ್ಲಿ ಗೆಲುವು ಸಾಧಿಸಿದೆ.
ಈ ತಿಂಗಳ ಆರಂಭದಲ್ಲಿ ಮಾನೇಸರ್, ಗುರುಗ್ರಾಮ್, ಫರಿದಾಬಾದ್, ಹಿಸಾರ್, ರೋಹ್ಟಕ್, ಕರ್ನಾಲ್, ಯಮುನಾನಗರ, ಪಾಣಿಪತ್, ಅಂಬಾಲ ಮತ್ತು ಸೋನಿಪತ್ ನಗರ ಪಾಲಿಕೆಗಳಲ್ಲಿ ಮೇಯರ್ ಮತ್ತು ವಾರ್ಡ್ ಸದಸ್ಯರ ಹುದ್ದೆಗಳಿಗೆ ಚುನಾವಣೆ ನಡೆದಿತ್ತು. ಅಂಬಾಲ ಮತ್ತು ಸೋನಿಪತ್ ಪುರಸಭೆಗಳ ಮೇಯರ್ ಹುದ್ದೆಗೆ ಉಪಚುನಾವಣೆಗಳು ಸಹ ನಡೆದಿತ್ತು.