ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಾಸಕ ಮುನಿರತ್ನ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಎಸ್‌ಐಟಿ ರಚನೆಗೆ ಆದೇಶಿಸಿದೆ. ಹಿರಿಯ ಐಪಿಎಸ್ ಅಧಿಕಾರಿ ಬಿ.ಕೆ. ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿದೆ.
ಅತ್ಯಾಚಾರ ಪ್ರಕರಣದಲ್ಲಿ ಆರ್‌ಆರ್‌ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಜಾತಿ ನಿಂದನೆ ಪ್ರಕರಣದಲ್ಲಿ ವಿಶೇಷ ಜನತಾ ನ್ಯಾಯಾಲಯ ಗುರುವಾರ ಜಾಮೀನು ಮಂಜೂರು ಮಾಡಿತ್ತು. ಒಂದು ಪ್ರಕರಣದಲ್ಲಿ ಜಾಮೀನು ಪಡೆದು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಹೊರಬರುತ್ತಿದ್ದಂತೆ ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಬಂಧಿಸಿದ್ದರು.