ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಚಿವರು, ಶಾಸಕರು, ಒಕ್ಕಲಿಗ ಸಮುದಾಯದ ಮುಖಂಡರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಬಿಜೆಪಿ ಶಾಸಕ ಮುನಿರತ್ನ ಮಾಡಿರುವ ಜಾತಿ ನಿಂದನೆ, ಜೀವ ಬೆದರಿಕೆ ಪ್ರಕರಣ ಹಾಗೂ ಅತ್ಯಾಚಾರ, ಹನಿಟ್ರಾಪ್ ಕೇಸ್ ತನಿಖೆಗೆ ಎಸ್‌ಐಟಿ ರಚನೆ ಮಾಡುವಂತೆ ಒತ್ತಾಯಿಸಿದ್ದಾರೆ.
ಸಚಿವ ಕೃಷ್ಣ ಬೈರೇಗೌಡ ನೇತೃತ್ವದ ನಿಯೋಗ ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮುನಿರತ್ನ ತನಿಖೆಗೆ ಎಸ್‌ಐಟಿ ರಚನೆಗೆ ಒತ್ತಾಯಿಸಿದರು.
ಮುನಿರತ್ನ ವಿರುದ್ಧ ದಾಖಲಾಗಿರುವ ಎಲ್ಲಾ ಪ್ರಕರಣಗಳ ತನಿಖೆಯನ್ನು ಎಸ್‌ಐಟಿಗೆ ವಹಿಸುವಂತೆ ಅವರು ಕೋರಿದ್ದಾರೆ. ಗೃಹ ಸಚಿವರೊಂದಿಗೆ ಮಾತನಾಡಿ ನಿರ್ಧಾರ ಕೈಗೊಳ್ಳುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ.