ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜರಾಜೇಶ್ವರಿ ನಗರ ಕ್ಷೇತ್ರಕ್ಕೆ ಸರ್ಕಾರ ಅನುದಾನ ಕಡಿತಗೊಳಿಸಿದೆ ಎಂದು ಆರೋಪಿಸಿ ಇಂದು ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರು ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸಲಿದ್ದಾರೆ.
ರಾಜರಾಜೇಶ್ವರಿ ನಗರ ಕ್ಷೇತ್ರಕ್ಕೆ ನೀಡಬೇಕಿದ್ದ ಅನುದಾನ ಕಡಿತಗೊಳಿಸಿ, ಯಶವಂತಪುರ, ಬ್ಯಾಟರಾಯನಪುರ ಸೇರಿ ಬೇರೆ ಕ್ಷೇತ್ರಕ್ಕೆ ಹಂಚಿಕೆ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಸರ್ಕಾರದ ಈ ನಡೆಯ ವಿರುದ್ಧ ಆಕ್ರೋಶಗೊಂಡಿದ್ದಾರೆ.