ಹೊಸದಿಗಂತ ಡಿಜಿಟಲ್ ಡೆಸ್ಕ್:
ಮತದಾರರಿಗೆ ಸೀರೆ ಹಂಚಿದ ಆರೋಪದಡಿ ಸಚಿವ ಮುನಿರತ್ನ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ.
ಮುನಿರತ್ನ ಬೆಂಬಲಿಗರು ಸೀರೆ ಹಂಚುತ್ತಿದ್ದರು ಎಂದು ಚುನಾವಣಾ ಆಯೋಗದ ಅಧಿಕಾರಿ ಮನೋಜ್ ಕುಮಾರ್ ನೀಡಿದ ದೂರಿನ ಮೇರೆಗೆ ಮೂವರ ವಿರುದ್ಧ ರಾಜಾರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚೆಗೆ ಆರ್.ಆರ್. ನಗರದ ಬಂಗಾರಪ್ಪ ನಗರದಲ್ಲಿ ಮತದಾರರಿಗೆ ಮುನಿರತ್ನ ಬೆಂಬಲಿಗರು ಸೀರೆ ಹಂಚುವ ವೇಳೆ ಸಿಕ್ಕಿಬಿದ್ದಿದ್ದರು.
ಕಳೆದ ಮಾರ್ಚ್ 31ರಂದು ಖಾಸಗಿ ಸುದ್ದಿವಾಹಿನಿಯಲ್ಲಿ ಅಲ್ಪ ಸಂಖ್ಯಾತ ಕ್ರೈಸ್ತ ಸಮುದಾಯವನ್ನು ಹೊಡೆದು ಓಡಿಸಿ ಎಂದು ಹೇಳಿಕೆ ನೀಡಿದ್ದರು.ಕೋಮುದ್ವೇಷ ಪ್ರಚೋದಿತ ಭಾಷಣ ಮಾಡಿದ ಆರೋಪದಡಿ ಬೆಂಗಳೂರಿನ ಆರ್‌ಆರ್ ನಗರ ಠಾಣೆಯಲ್ಲಿ ಮುನಿರತ್ನ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಇದೀಗ ಸೀರೆ ಹಂಚಿಕೆ ವಿಷಯಕ್ಕೆ ಮತ್ತೊಂದು ಎಫ್ಐಆರ್ ದಾಖಲಾಗಿದೆ.