ಮುನಿರತ್ನಗೆ ಎದುರಾಯ್ತು ಮತ್ತೊಂದು ಸಂಕಷ್ಟ.. ಅತ್ಯಾಚಾರ ಕೇಸ್‌ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಬಿಎಂಪಿ ಗುತ್ತಿಗೆದಾರನಿಗೆ ಕಿರುಕುಳ ನೀಡಿ ಜಾತಿ ನಿಂದನೆ ಪ್ರಕರಣ ಎದುರಿಸುತ್ತಿರುವ ಮುನಿರತ್ನ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ.

ರಾಮನಗರ ಜಿಲ್ಲೆಯ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಶಾಸಕ ಮುನಿರತ್ನ ಸೇರಿದಂತೆ ಒಟ್ಟು ಏಳು ಆರೋಪಿಗಳ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.

ಐಪಿಸಿ ಸೆಕ್ಷನ್ 354ಎ, 354ಸಿ, 376, 506, 504, 120(ಬಿ), 149, 384, 406, 308 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಮುನಿರತ್ನ (ಎ1), ವಿಜಯ್ ಕುಮಾರ್ (ಎ2), ಸುಧಾಕರ್ (A3), ಕಿರಣ್ ಕುಮಾರ್ (A4), ರೋಹಿತ್ ಗೌಡ (A5), ಮಂಜುನಾಥ್ (A6) ಮತ್ತು ಲೋಕಿ (A7) ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಕಗ್ಗಲೀಪುರದ ಖಾಸಗಿ ರೆಸಾರ್ಟ್‌ನಲ್ಲಿ ಅತ್ಯಾಚಾರ ನಡೆದಿದೆ ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ. ಸದ್ಯ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!