ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನದ ನಂತರ ಅವರ ನಿವಾಸದ ಬಳಿ ಪೊಲೀಸರು ಬಿಗಿ ಭದ್ರತೆಯನ್ನು ನಿಯೋಜಿಸಿದ್ದಾರೆ.
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ನಟ ದರ್ಶನ್ ನಿವಾಸಕ್ಕೆ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ದರ್ಶನ್ ನಿವಾಸಕ್ಕೆ ಪೊಲೀಸರು ಭದ್ರತೆ ಒದಗಿಸಿದ್ದಾರೆ.
ದರ್ಶನ್ ಅವರ ಆಪ್ತ ಗೆಳತಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿ ರೇಣುಕಾಸ್ವಾಮಿಯನ್ನು ಹತ್ಯೆ ಮಾಡಲಾಗಿತ್ತು. ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆಸಿ, ಜೂನ್ 8 ರಂದು ಶೆಡ್‌ನಲ್ಲಿ ಹಾಕಿ ಕೊಲೆ ಮಾಡಲಾಗಿತ್ತು. ಜೂನ್ 9 ರಂದು ಅವರನ್ನು ಹತ್ಯೆ ಮಾಡಲಾಗಿತ್ತು ಎನ್ನಲಾಗಿದೆ.