June 22, 2026
Monday, June 22, 2026
spot_img

6 ಮಂದಿಯ ಹ*ತ್ಯೆ ಪ್ರಕರಣ: ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಮೇಲೆ ಫೈರಿಂಗ್

ಹೊಸದಿಗಂತ ವರದಿ ವಿಜಯಪುರ:

ಕೊಲೆ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ, ಬಂಧಿಸಿರುವ ಘಟನೆ ನಗರ ಹೊರ ವಲಯ ಇಟ್ಟಂಗಿಹಾಳ ಬಳಿ ನಡೆದಿದೆ.

ಚಡಚಣ ತಾಲೂಕಿನ ಗೋವಿಂದಪುರದಲ್ಲಿ 6 ಜನರ ಹತ್ಯಾಕಾಂಡ ಪ್ರಕರಣದ ಮತ್ತೊಬ್ಬ ಮುಖ್ಯ ಆರೋಪಿ ಮಹೇಶ್ ತಳವಾರ್ ನನ್ನು ಬಂಧಿಸಲು ಹೋದಾಗ, ಆರೋಪಿ ಮಹೇಶ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾನೆ. ಆಗ ಪೊಲೀಸರು ಎರಡು ಬಾರಿ ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ:

ಆದರೂ ಆರೋಪಿ ಓಡಿ ಹೋಗಲು ಯತ್ನಿಸಿದಾಗ ಕಾಲಿಗೆ ಗುಂಡು ಹಾರಿಸಿ ಮಹೇಶನ ಬಂಧನ ಮಾಡಿದ್ದಾರೆ. ಈ ಘಟನೆಯಲ್ಲಿ ಆರೋಪಿ ಮಹೇಶ ಹಾಗೂ ಇಬ್ಬರು ಪೊಲೀಸರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ‌

ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !