ಕೊಲೆ ಕೇಸ್: ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ಗೆ ಜಾಮೀನು ಮಂಜೂರು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿದ್ದ ಒಲಿಂಪಿಕ್ ಕುಸ್ತಿಪಟು ಸುಶೀಲ್ ಕುಮಾರ್ ಗೆ ದೆಹಲಿ ಹೈಕೋರ್ಟ್ ಮಂಗಳವಾರ ನಿಯಮಿತ ಜಾಮೀನು ನೀಡಿದೆ.
ನ್ಯಾಯಮೂರ್ತಿ ಸಂಜೀವ್ ನರುಲಾ ನೇತೃತ್ವದ ಪೀಠವು ಕುಸ್ತಿಪಟುವಿನ ಬಿಡುಗಡೆಗೆ ಆದೇಶಿಸಿದೆ.

ಮೇ 2021 ರಲ್ಲಿ ಜೂನಿಯರ್ ಕುಸ್ತಿಪಟು ಸಾಗರ್ ಧಂಕರ್ ಅವರ ಕೊಲೆ ಪ್ರಕರಣದಲ್ಲಿ ಸುಶೀಲ್ ಕುಮಾರ್ ಸಹ ಆರೋಪಿಗಳಲ್ಲಿ ಒಬ್ಬರಾಗಿದ್ದರು.

ಜೂನ್ 2, 2021 ರಂದು ಕೊಲೆ ಪ್ರಕರಣದಡಿಯಲ್ಲಿ ಸುಶೀಲ್ ಕುಮಾರ್ ಅವರನ್ನು ಬಂಧಿಸಲಾಗಿತ್ತು. ಇದರ ನಡುವೆ ಜುಲೈ 2023 ರಲ್ಲಿ ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ಅವರಿಗೆ 7 ದಿನಗಳ ಮಧ್ಯಂತರ ಜಾಮೀನು ನೀಡಲಾಗಿತ್ತು. ಇದಾದ ಬಳಿಕ ಮತ್ತೆ ಜೈಲು ಪಾಲಾಗಿದ್ದ ಸುಶೀಲ್ ಕುಮಾರ್ ಅವರಿಗೆ ಇದೀಗ ದೆಹಲಿ ಹೈಕೋರ್ಟ್ ನಿಯಮಿತ ಜಾಮೀನು ಮಂಜೂರು ಮಾಡಿದೆ.

ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮೇ 4, 2021 ರಂದು ದೆಹಲಿಯ ಛತ್ರಸಾಲ್ ಕ್ರೀಡಾಂಗಣದ ಪಾರ್ಕಿಂಗ್ ಸ್ಥಳದಲ್ಲಿ ಸಾಗರ್ ಧಂಖರ್ ಮತ್ತು ಅವರ ಸ್ನೇಹಿತರಾದ ಜೈ ಭಗವಾನ್ ಮತ್ತು ಭಗತ್ ಮೇಲೆ ಸುಶೀಲ್ ಕುಮಾರ್ ಅವರು ಹಲ್ಲೆ ನಡೆಸಿದ್ದಾರೆಂಬ ಆರೋಪವಿದೆ. ಈ ದಾಳಿಯಲ್ಲಿ ಗಾಯಗೊಂಡಿದ್ದ ಸಾಗರ್ ಧಂಖರ್ ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದರು. ಇದೇ ಕಾರಣದಿಂದಾಗಿ ಸುಶೀಲ್ ಕುಮಾರ್ ಅವರು ಜೈಲು ಪಾಲಾಗಿದ್ದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!