ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಡುಪಿ ಪೊಲೀಸ್ ಹಾಗೂ ನಕ್ಸಲ್ ನಿಗ್ರಹ ಪಡೆ ಕೇರಳದಲ್ಲಿ ವಶಕ್ಕೆ ಪಡೆದಿರುವ ನಕ್ಸಲ್ ಶ್ರೀಮತಿ ಯಾನೆ ಉನ್ನಿಮಾಯಳನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ಕಾರ್ಕಳಕ್ಕೆ ಕರೆ ತಂದಿದ್ದಾರೆ.
ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಬೆಳಗೋಡುಕೊಡಿಗೆ ನಿವಾಸಿಯಾಗಿರುವ ಶ್ರೀಮತಿ, ಕಳೆದ ನವೆಂಬರ್ 7 ರಂದು ಕೇರಳ ಪೊಲೀಸರಿಗೆ ಸೆರೆಸಿಕ್ಕಿದ್ದಳು. ಬಳಿಕ ಈಕೆ ಕೇರಳ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಳು. 2011 ಡಿಸೆಂಬರ್ 19 ರಂದು ಪೊಲೀಸ್ ಮಾಹಿತಿದಾರ ಮಲೆಕುಡಿಯ ಜನಾಂಗದ ಸದಾಶಿವ ಗೌಡನ ಅಪಹರಣ, ಹತ್ಯೆ ಪ್ರಕರಣ ಸಂಬಂಧ ಸ್ಥಳ ಮಹಜರು ಮಾಡಲು ಈಕೆಯನ್ನು ಪೊಲೀಸರು ಬಾಡಿ ವಾರೆಂಟ್ ಮೇಲೆ ಕಾರ್ಕಳಕ್ಕೆ ಕರೆತಂದಿದ್ದಾರೆ. ಶ್ರೀಮತಿ ಮೇಲೆ ರಾಜ್ಯದ ಹಲವು ಠಾಣೆಗಳಲ್ಲಿ 9 ಪ್ರಕರಣಗಳಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ