spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 27, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೊಲೆ ಯತ್ನ ಆರೋಪ: ಅಸ್ಸಾಂ ಸಿಎಂ ವಿರುದ್ಧ ಎಫ್​ಐಆರ್ ದಾಖಲಿಸಿದ​ ಮಿಜೋರಾಂ ಪೊಲೀಸರು

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಅಸ್ಸಾಂ ಮತ್ತು ಮಿಜೋರಾಂ ರಾಜ್ಯಗಳ ನಡುವಿನ ಗಡಿ ಸಂಘರ್ಷ ತಾರಕಕ್ಕೇರಿದ್ದು, ಸದ್ಯಕ್ಕೆ ತಣ್ಣಗಾಗುವಂತೆ ಕಾಣುತ್ತಿಲ್ಲ. ಇದರ ನಡುವೆ ಮಿಜೋರಾಂ ಪೊಲೀಸರು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ವಿರುದ್ಧ ಎಫ್​ಐಆರ್​ ದಾಖಲಿಸಿದ್ದಾರೆ.

ಜುಲೈ 26ರಂದು ಅಂತಾರಾಜ್ಯ ಗಡಿಯಲ್ಲಿ ಉಂಟಾದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೊಲೆ ಯತ್ನ ಮತ್ತು ಕೆಲವು ಅಪರಾಧಕ್ಕೆ ಸಂಚು ರೂಪಿಸಿರುವುದಾಗಿ  ಅಸ್ಸಾಂ ಸಿಎಂ ವಿರುದ್ಧ ಮಿಜೋರಾಂ ಪೊಲೀಸರು ಎಫ್​ಐಆರ್​ ದಾಖಲಿಸಿಕೊಂಡಿದ್ದಾರೆ.

ಅಸ್ಸಾಂ ಸಿಎಂ ಸೇರಿದಂತೆ, ಅಸ್ಸಾಂ ಹಿರಿಯ ಪೊಲೀಸ್​ ಅಧಿಕಾರಿಗಳು, ಇಬ್ಬರು ಉನ್ನತ ಅಧಿಕಾರಿಗಳು ಮತ್ತು 200 ಪೊಲೀಸ್​ ಸಿಬ್ಬಂದಿಯ ಹೆಸರನ್ನು ಎಫ್​ಐಆರ್​ನಲ್ಲಿ ಉಲ್ಲೇಖಿಸಲಾಗಿದೆ.

ಐಪಿಸಿ ಶಸ್ತ್ರಾಸ್ತ್ರ ಕಾಯಿದೆ ಮತ್ತು ಮಿಜೋರಾಂ ನಿಯಂತ್ರಣ ಮತ್ತು ಕೋವಿಡ್ -19 ಕಾಯ್ದೆಯ ವಿವಿಧ ಸೆಕ್ಷನ್​ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss