ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಲ್ಲಿ ಅಪರಿಚಿತ ವ್ಯಕ್ತಿಯ ತಲೆಯ ಮೇಲೆ ದುಷ್ಕರ್ಮಿಗಳು ಕಲ್ಲು ಎತ್ತಿ ಹಾಕಿ ಅತ್ಯಂತ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಬೆಂಗಳೂರಿನ ಜೀವನ ಹಳ್ಳಿ ಬಳಿ ರೈಲ್ವೆ ಹಳಿ ಸಮೀಪ ಘಟನೆ ನಡೆದಿದ್ದು,ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಕಂಟೋನ್ಮೆಂಟ್ ರೈಲ್ವೇ ಠಾಣೆಯ ಪೊಲೀಸರಿಗೆ ಮಾಹಿತಿ ರವಾನೆ ಮಾಡಲಾಗಿದೆ.ಅಪರಿಚಿತನ ಪತ್ತೆಗಾಗಿ ಇದೀಗ ಪೊಲೀಸರು ತನಿಖೆ ಕೈಗೊಂಡಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.