ಹಿಂದೂ ಯುವಕನ‌ ಕೊಲೆ | ಆರೋಪಿ ಸುಳಿವು ಸಿಕ್ಕಿದೆ, ಶೀಘ್ರ ಬಂಧಿಸುತ್ತೇವೆ: ಗೃಹ ಸಚಿವ ಆರಗ ಜ್ಞಾನೇಂದ್ರ

ದಿಗಂತ ವರದಿ ಶಿವಮೊಗ್ಗ :

ನಗರದಲ್ಲಿ ಭಾನುವಾರ ನಡೆದ ಹಿಂದೂ ಯುವಕನ‌ ಕೊಲೆ ಆರೋಪಿಗಳ ಸುಳಿವು ಸಿಕ್ಕಿದ್ದು, ಪೊಲೀಸರು ಶೀಘ್ರದಲ್ಲಿ ಬಂಧಿಸಲಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ಸೋಮವಾರ ಬೆಳಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 4-5 ಜನ ಬಂದು ಕೊಲೆ ಮಾಡಿ ಹೋಗಿರುವ ಬಗ್ಗೆ ಮಾಹಿತಿ ಇದೆ. ಕೊಲೆಯಾದ ಯುವಕ ಹಿಂದೂ ಸಂಘಟನೆಯ ಕಾರ್ಯಕರ್ತ. ಹಿಂದೆಯೂ ಆತನ ಮೇಲೆ ಹಲ್ಲೆಗೆ ಯತ್ನ ನಡೆದ ಬಗ್ಗೆ ಮಾಹಿತಿ ಇದೆ ಎಂದರು.
ನಗರದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಯಾರೂ ಕೂಡ ಉದ್ರೇಕಕ್ಕೆ ಒಳಗಾಗಬಾರದು. ಪೊಲೀಸ್ ಬಂದೊಬಸ್ತ್ ಹೆಚ್ಚಿಸಲಾಗಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!