ಕಾಶ್ಮೀರದಲ್ಲಿ ಹಿಂದುಗಳ ಹತ್ಯೆ: ಅಜಿತ್ ದೋವಲ್ ಜೊತೆ ಅಮಿತ್ ಶಾ ತುರ್ತು ಸಭೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಾಶ್ಮೀರದಲ್ಲಿ ಹಿಂದುಗಳ ನಡೆಯುತ್ತಿರುವ ಹತ್ಯೆಗಳ ಸರಣಿ ಮುಂದುವರೆದಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಭೇಟಿಯಾಗಿ ಹತ್ಯೆಗಳ ಕುರಿತು ಚರ್ಚಿಸಿದ್ದಾರೆ.
ಪ್ರಧಾನಿ ಕಾರ್ಯಾಲಯದ ಕೇಂದ್ರದ ರಾಜ್ಯ ಸಚಿವ ಡಾ.ಜಿತೇಂದ್ರ ಸಿಂಗ್ ಕೂಡ ಸಭೆಯಲ್ಲಿ ಪಾಲ್ಗೊಂಡರು.
ಮೂರು ದಿನಗಳಲ್ಲಿ ಕಣಿವೆಯಲ್ಲಿ ಹಿಂದುಗಳ ಮೇಲಿನ ಎರಡನೇ ಉದ್ದೇಶಿತ ದಾಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ಭಯೋತ್ಪಾದಕರಿಂದ ರಾಜಸ್ಥಾನದ ಬ್ಯಾಂಕ್ ಮ್ಯಾನೇಜರ್ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ ಬಳಿಕ ತುರ್ತು ಸಭೆ ನಡೆಸಲಾಗ್ತಿದೆ.
ಇಲಾಖಾಹಿ ದೇಹತಿ ಬ್ಯಾಂಕ್‌ನ ಅರೆಹ್ ಶಾಖೆಗೆ ಭಯೋತ್ಪಾದಕ ನುಗ್ಗಿ ಬ್ಯಾಂಕ್ ಮ್ಯಾನೇಜರ್ ವಿಜಯ್ ಕುಮಾರ್ ಮೇಲೆ ಗುಂಡು ಹಾರಿಸಿದ್ದ. ಸಿಸಿಕ್ಯಾಮೆರಾ ದೃಶ್ಯಾವಳಿಯಲ್ಲಿ ಹಂತಕನು ಶಾಖೆಯೊಳಗೆ ಪ್ರವೇಶಿಸಿ ಗುಂಡು ಹಾರಿಸಿ ಪರಾರಿಯಾಗುವುದು ದಾಖಲಾಗಿದೆ.
ಜಮ್ಮುವಿನ ಹಿಂದು ಶಿಕ್ಷಕಿ ರಜನಿ ಬಾಲಾ ಅವರನ್ನು ಕುಲ್ಗಾಮ್‌ನಲ್ಲಿ ಶಾಲೆಯ ಹೊರಗೆ ಭಯೋತ್ಪಾದಕರು ಕೊಂದ ಎರಡು ದಿನಗಳ ನಂತರ ಈ ದಾಳಿ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!