ಬಹುಭಾಷಾ ನಟಿ ಅನುಷ್ಕಾ ಶೆಟ್ಟಿ ಸಹೋದರನ ಹತ್ಯೆಗೆ ಸಂಚು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಬಹುಭಾಷಾ ನಟಿ ಅನುಷ್ಕಾ ಶೆಟ್ಟಿ ಸಹೋದರ ಗುಣರಂಜನ್ ಶೆಟ್ಟಿ ಹತ್ಯೆಗೆ ಸಂಚು ರೂಪಿಸಲಾಗಿದೆ ಎನ್ನುವ ವದಂತಿ ಹರಿದಾಡುತ್ತಿದ್ದು, ಈ ಹಿನ್ನೆಲೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಭೇಟಿಯಾಗಿ ಭದ್ರತೆ ನೀಡುವಂತೆ ಮನವಿ ಮಾಡಿದ್ದಾರೆ.
ದಿವಂಗತ ಮುತ್ತಪ್ಪ ರೈ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಮನ್ಮಿತ್ ರೈ ನಟಿ ಅನುಷ್ಕಾ ಶೆಟ್ಟಿ ಸಹೋದರ ಗುಣರಂಜನ್ ಶೆಟ್ಟಿ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಗುಣರಂಜನ್ ಶೆಟ್ಟಿಗೆ ಮನ್ಮಿತ್ ರೈನಿಂದ ಜೀವ ಬೆದರಿಕೆಯಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಭೇಟಿಯಾಗಿ ಭದ್ರತೆ ನೀಡುವಂತೆ ಮನವಿ ಮಾಡಿದ್ದಾರೆ.
ಒಂದು ಕಾಲದಲ್ಲಿ ಮುತ್ತಪ್ಪ ರೈ ಆಪ್ತವಲಯದಲ್ಲಿಯೇ ಗುರುತಿಸಿಕೊಂಡಿದ್ದ ಗುಣರಂಜನ್ ಶೆಟ್ಟಿ ಹಾಗೂ ಮನ್ಮಿತ್ ರೈ ನಡುವೆ ಗಲಾಟೆಯಾಗಿದೆ ಎನ್ನಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!