Monday, August 8, 2022

Latest Posts

ಮಹಿಳೆಯರಿಬ್ಬರ ಕೊಲೆ ಯತ್ನ: ಒಬ್ಬರ ಸಾವು, ಮತ್ತೊಬ್ಬಾಕೆ ಗಂಭೀರ

ಹೊಸದಿಗಂತ ವರದಿ, ಮಡಿಕೇರಿ:

ಹಾಡಹಗಲೇ ಮಹಿಳೆಯರಿಬ್ಬರನ್ನು ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿರುವ ಘಟನೆ ದಕ್ಷಿಣ ಕೊಡಗಿನ ಟಿ.ಶೆಟ್ಟಿಗೇರಿಯಲ್ಲಿ‌ ನಡೆದಿದ್ದು, ಈ ಪೈಕಿ ಒಬ್ಬರು ಸಾವಿಗೀಡಾಗಿದ್ದರೆ, ಮತ್ತೊಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಟಿ.ಶೆಟ್ಟಿಗೇರಿ ಗ್ರಾಮದ ಪ್ರೇಮಾ ( )ಎಂಬವರೇ ಸಾವಿಗೀಡಾದವರಾಗಿದ್ದಾರೆ.
ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಸಂಬಂಧಿಯೇ ಈ ಕೃತ್ಯ ನಡೆಸಿರುವ ಶಂಕೆ ವ್ಯಕ್ತವಾಗಿದ್ದು,‌ಭಾನುವಾರ ಸಂಜೆಯೇ ಈ ಕೃತ್ಯ ನಡೆದಿರುವುದಾಗಿ ಹೇಳಲಾಗಿದೆ. ಸೋಮವಾರ ಬೆಳಗ್ಗೆ ದಾರಿಯಲ್ಲಿ ಶವ ಪತ್ತೆಯಾಗಿದ್ದು, ಸ್ಥಳಕ್ಕೆ ಶ್ರೀಮಂಗಲ ಪೊಲೀಸರು ಭೇಟಿ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss