Sunday, December 3, 2023

Latest Posts

ಇಮ್ರಾನ್‌ ಖಾನ್‌ ಗೆ ಕೊಲೆ ಬೆದರಿಕೆ: ಕಟ್ಟೆಚ್ಚರ ವಹಿಸಿದ ಭದ್ರತಾ ಪಡೆಗಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಅವರಿಗೆ ಕೊಲೆ ಬೆದರಿಕೆಗಳು ಬಂದಿವೆ, ಅವರ ಹತ್ಯೆಗೆ ಸಂಚು ರೂಪಿಸಲಾಗುತ್ತಿದೆ ಎಂದು ವದಂತಿಗಳು ಹಬ್ಬಿರುವ ಬೆನ್ನಲ್ಲೇ ಇಸ್ಲಾಮಾಬಾದ್‌ ಪೋಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಅಧ್ಯಕ್ಷ ಇಮ್ರಾನ್ ಖಾನ್ ಅವರು ಇಸ್ಲಾಮಾಬಾದ್‌ನಲ್ಲಿರುವ ವಸತಿ ಪ್ರದೇಶವಾಗಿರುವ ಬನಿ ಗಾಲಾಗೆ ಇಮ್ರಾನ್‌ ಖಾನ್‌ ಆಗಮನದ ಹಿನ್ನೆಲೆಯಲ್ಲಿ ಭದ್ರತಾ ಏಜೆನ್ಸಿಗಳನ್ನು ಹೈ ಅಲರ್ಟ್‌ನಲ್ಲಿ ಇರಿಸಲಾಗಿದೆ. ಈಗಾಗಲೇ 144 ಸೆಕ್ಷನ್‌ ಜಾರಿಗೊಳಿಸಿದ್ದು ಸಾಮೂಹಿಕವಾಗಿ ಸೇರುವುದ್ನು ನಿಷೇಧಿಸಲಾಗಿದೆ. ಇಮ್ರಾನ್‌ ಖಾನ್‌ರಿಗೆ ಕಾನೂನಾತ್ಮಕವಾಗಿ ಎಲ್ಲರೀತಿಯ ಭದ್ರತೆ ಒದಗಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಹಿನ್ನೆಯಲ್ಲಿ ಇಮ್ರಾನ್‌ ಖಾನ್‌ ಸೋದರಳಿಯ ಪ್ರತಿಕ್ರಿಯಿಸಿದ್ದು “ಇಮ್ರಾನ್‌ ಖಾನ್‌ಮೇಲೆ ಯಾವುದೇ ದಾಳಿ ನಡೆದರೆ ಅದನ್ನು ಪಾಕಿಸ್ತಾನದ ಮೇಲಿನ ಆಕ್ರಮಣ ಎಂದು ಪರಿಗಣಿಸಲಾಗುವುದು. ಅದಕ್ಕೆ ಆಡಳಿತಾರೂಢ ಸರ್ಕಾರ ಹೊಣೆಯಾಗುತ್ತದೆ. ಅವರಿಗೇನಾದರೂ ಆದರೆ ಉಗ್ರವಾಗಿ ಪ್ರತಿಕ್ರಿಯೆ ನೀಡಲಾಗುತ್ತದೆ” ಎಂದು ಎಚ್ಚರಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!