ಹೊಸದಿಗಂತ ಡಿಜಿಟಲ್ ಡೆಸ್ಕ್
ಹಿಜಾಬ್ ತೀರ್ಪು ಪ್ರಕಟಿಸಿದ ಕರ್ನಾಟಕ ಹೈಕೋಟ್ ಮೂವರು ನ್ಯಾಯಾಧೀಶರಿಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡು ಪೊಲೀಸರು ತಿರುನಲ್ವೇಲಿಯಿಂದ ಕೋವೈ ರಹಮತುಲ್ಲಾ ಮತ್ತು ತಂಜಾವೂರಿನ ಎಸ್ ಜಮಾಲ್ ಮೊಹಮ್ಮದ್ ಉಸ್ಮಾನಿಯನ್ನು ಬಂಧಿಸಿದ್ದಾರೆ.
ಇಬ್ಬರೂ ಆರೋಪಿಗಳು ಇಸ್ಲಾಮಿಕ್ ಧಾರ್ಮಿಕ ಸಂಘಟನೆಯಾದ ತಮಿಳುನಾಡು ತೌಹೀದ್ ಜಮಾತ್ ಸದಸ್ಯರಾಗಿದ್ದರು.
ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಹಲವು ದೂರುಗಳುದಾಖಲಾಗಿದ್ದು, ಇದೀಗ ತಮಿಳುನಾಡು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಇಬ್ಬರ ಹೊರತಾಗಿ ಹಲವರ ವಿರುದ್ಧ ದೂರುಗಳು ದಾಖಲಾಗಿದ್ದು, ತನಿಖೆ ಮುಂದುವರೆದಿದೆ.