ಮುರ್ಮು ಆಯ್ಕೆ: ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಸಂಭ್ರಮಾಚರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್

ಎನ್‍ಡಿಎ ಮತ್ತು ವಿವಿಧ ಪಕ್ಷಗಳ ಬೆಂಬಲಿತ ರಾಷ್ಟ್ರಪತಿ ಅಭ್ಯರ್ಥಿ ಗೌರವಾನ್ವಿತ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಮತ ಎಣಿಕೆ ವೇಳೆ ಭಾರಿ ಮುನ್ನಡೆ ಲಭಿಸಿದ ಬಗ್ಗೆ ತಿಳಿದು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಸಂಜೆ ಸಂಭ್ರಮಾಚರಣೆ ನಡೆಯಿತು.
ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾಣಾ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎನ್.ರವಿಕುಮಾರ್, ಮಹೇಶ್ ಟೆಂಗಿನಕಾಯಿ ಮತ್ತು ಸಿದ್ದರಾಜು, ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಈ ಸಂಭ್ರಮದಲ್ಲಿ ಭಾಗವಹಿಸಿದ್ದರು.
ಪರಸ್ಪರ ಸಿಹಿ ತಿನ್ನಿಸಿ ಕಾರ್ಯಕರ್ತರು ಸಂಭ್ರಮ ವ್ಯಕ್ತಪಡಿಸಿದರು. ಮುರ್ಮು ಅವರ ಪರವಾಗಿ ಘೋಷಣೆಗಳನ್ನು ಕೂಗಿದರು. ಕುಣಿದು ಸಂಭ್ರಮದಲ್ಲಿ ಭಾಗಿಯಾದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!