ಪಾಕಿಸ್ತಾನದಲ್ಲಿ ಭಾರೀ ಹಿಮಪಾತ: ಮೃತರ ಸಂಖ್ಯೆ 22ಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಾಕಿಸ್ತಾನದ ಪ್ರಸಿದ್ಧ ಪ್ರವಾಸಿ ತಾಣ ಮುರ್ರೆಯಲ್ಲಿ ಭಾರೀ ಹಿಮಪಾತ ಸಂಭವಿಸಿದ್ದು, ಇದರ ಪರಿಣಾಮ ಮೃತರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.
ರಸ್ತೆಗಳು ಸಂಪೂರ್ಣವಾಗಿ ಹಿಮಾವೃತವಾಗಿದ್ದು, 9 ಮಕ್ಕಳು ಸೇರಿದಂತೆ 22 ಮಂದಿ ಕಾರಿನೊಳಗೆ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಮೃತದೇಹಗಳನ್ನು ಹೊರತೆಗೆಯಲಾಗಿದೆ.
ಸದ್ಯ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಿಗಿತಗೊಳಿಸಲಾಗಿದ್ದು, ಹಿಮ ಬೀಳುತ್ತಿರುವ ಕಾರಣ ಸುಮಾರು 23 ಸಾವಿರ ವಾಹನಗಳನ್ನು ಹಿಂದಕ್ಕೆ ಕಳುಹಿಸಲಾಗಿದೆ. ಇನ್ನು ಒಂದು ಸಾವಿರ ವಾಹನಗಳು ಹಿಮದಲ್ಲಿ ಸಿಲುಕಿರುವ ಬಗ್ಗೆ ವರದಿಯಾಗಿದೆ. ಸ್ಥಳದಲ್ಲಿ ರಕ್ಷಣಾ ಪಡೆ ಹಾಗೂ ಸೈನಿಕರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!