ಮುರುಡೇಶ್ವರದಲ್ಲಿ ವಿದ್ಯಾರ್ಥಿನಿಯರ ಸಾವು ಪ್ರಕರಣ: ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮುರುಡೇಶ್ವರದಲ್ಲಿ ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಶಿಕ್ಷಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೋಲಾರದಿಂದ ಮುರುಡೇಶ್ವರಕ್ಕೆ ಪ್ರವಾಸ ತೆರಳಿದ್ದವರ ಪೈಕಿ ನಾಲ್ಕು ಜನ ವಿದ್ಯಾರ್ಥಿನಿಯರು ನೀರು ಪಾಲಾದ ಬಳಿಕ ಉತ್ತರ ಕನ್ನಡ  ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಒಂದೆಡೆ ಮುರುಡೇಶ್ವರ ಕಡಲ ತೀರದಲ್ಲಿ ನಿರ್ಬಂಧ ಹೇರಲಾಗಿದ್ದು, ಇನ್ನೊಂದೆಡೆ ಮುಖ್ಯ ಶಿಕ್ಷಕಿ ಸೇರಿ ಒಟ್ಟು 7 ಶಿಕ್ಷಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶಿಕ್ಷಕರ ವಿರುದ್ದ ಪ್ರಕರಣ ದಾಖಲಿಸಲಾಗಿದ್ದು, ನಾಲ್ಕು ವಿದ್ಯಾರ್ಥಿನಿಯರ ಸಾವಿಗೆ ಕಾರಣ, ನಿರ್ಲಕ್ಷ್ಯ ಕುರಿತು ತನಿಖೆ ಕೈಗೊಂಡಿದ್ದಾರೆ. ಇದೀಗ ಮುರುಡೇಶ್ವರ ಬಿಟ್ಟಿರುವ ಪಾರ್ಥಿವ ಶರೀರಗಳು ಇಂದು (ಡಿ.12) ಕೋಲಾರ ಜಿಲ್ಲಾಧಿಕಾರಿಗಳ ಕಚೇರಿ ಆವರಣಕ್ಕೆ ತಲುಪಲಿದೆ. ಬಳಿಕ ಜಿಲ್ಲಾಡಳಿತದ ವತಿಯಿಂದ ಅಂತಿಮ ನಮನ ಸಲ್ಲಿಸಿ, ನಂತರ ಅವರವರ ಕುಟುಂಬಗಳಿಗೆ ಮೃತದೇಹಗಳನ್ನು ಹಸ್ತಾಂತರಿಸಲಾಗುತ್ತದೆ.

ಕೋಲಾರದ ಮುಳಬಾಗಿಲು ತಾಲೂಕಿನ ಕೊತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಮುರುಡೇಶ್ವರ ಕಡಲ ತೀರದಲ್ಲಿ ಆಟ ಆಡುವಾಗ ಶಾಲೆಯ 7 ವಿದ್ಯಾರ್ಥಿನಿಯರು ನೀರು ಪಾಲಾಗಿದ್ದರು. 7 ವಿದ್ಯಾರ್ಥಿನಿಯರ ಪೈಕಿ 4 ವಿದ್ಯಾರ್ಥಿನಿಯರು ಸಾವನ್ನಪ್ಪಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!