ಮುರುಘಾ ಶರಣರ ಬಂಧನವಾಗಿಲ್ಲ: ಎಡಿಜಿಪಿ ಅಲೋಕ್ ಕುಮಾರ್‌ ಅಧಿಕೃತ ಮಾಹಿತಿ

ಹೊಸದಿಗಂತ ವರದಿ, ಹುಬ್ಬಳ್ಳಿ:
ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾದ ಪೋಕ್ಸೊ ಪ್ರಕರಣದ ಕುರಿತು ಯಾರಿಂದಲೂ ಒತ್ತಡ ಬಂದಿಲ್ಲ. ಎಲ್ಲ ವಿಧದಲ್ಲೂ ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಅಪರಾಧ ಮತ್ತು ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾನೂನಿನ ಚೌಕಟ್ಟಿನಲ್ಲಿ ಯಾವ ರೀತಿ ತನಿಖೆ ನಡೆಯಬೇಕು ತನಿಖಾ ಅಧಿಕಾರಿಗಳು ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಮಕ್ಕಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಅವರ ಪೋಷಕರನ್ನು ಸಹ ಸಂಪರ್ಕಿಸಿ, ಮಾಹಿತಿ ಸಂಗ್ರಹಿಸಲು ಮುಂದಾಗಿದ್ದೇವೆ ಎಂದರು.
ಫೋಕ್ಸೊ ಕಾಯ್ದೆಯಡಿಯ ತನಿಖೆ ಮುಂದುವರಿದಿದೆ. ಅಧಿಕಾರಿಗಳು ಸಂಪೂರ್ಣ ಮಾಹಿತಿ ಇಲ್ಲದೆ ಮಾಧ್ಯಮದವರಿಗೆ ಮಾಹಿತಿ ನೀಡಬಾರದು ಎಂದು ಸೂಚಿಸಲಾಗಿದೆ. ಕೆಲವು ಮಾಧ್ಯಮಗಳಲ್ಲಿ ಮುರುಘಾ ಶ್ರೀಗಳ ಬಂಧನದ ಕುರಿತು ಮಾಹಿತಿ ಬರುತ್ತಿವೆ. ಬಂಧನವಾಗಿದ್ದರೆ ನನಗೆ ಮಾಹಿತಿ ದೊರೆಯುತ್ತಿತ್ತು. ಆದರೆ, ಈವರೆಗೆ ಅಂತಹ ಯಾವುದೇ ಮಾಹಿತಿ ದೊರಕಿಲ್ಲ ಎಂದು ಸ್ಪಷ್ಟಪಡಿಸಿದರು. ತನಿಖಾ ಹಂತದಲ್ಲಿ ಯಾವುದೇ ಮಾಹಿತಿ ನೀಡಬಾರದು ಎಂದು ಕೋರ್ಟ್ ಆದೇಶ ಸಹ ಇದೆ’ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!