ಹೊಸದಿಗಂತ ಡಿಜಿಟಲ್ ಡೆಸ್ಕ್:
ಇತ್ತೀಚೆಗೆ ಷರತ್ತುಬದ್ದ ಜಾಮೀನಿನ ಮೇಲೆ ಕಾರಾಗೃಹದಿಂದ ಬಿಡುಗಡೆಯಾಗಿದ್ದ ಮುರುಘಾ ಮಠದ ಶ್ರೀಗಳನ್ನು ಇದೀಗ ಪೊಲೀಸರು ಮತ್ತೆ ಬಂಧಿಸಿದ್ದಾರೆ.
ದಾವಣಗೆರೆಯ ವಿರಕ್ತ ಮಠದಲ್ಲಿದ್ದ ಶರಣರನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿ ಕರೆದೊಯ್ದಿದ್ದಾರೆ.
ಮೊದಲನೇ ಪೋಕ್ಸೊ ಪ್ರಕರಣದಲ್ಲಿ ಹೈಕೋರ್ಟ್ ನಿಂದ ಜಾಮೀನು ಪಡೆದು ಮುರುಘಾ ಶರಣರು ಇತ್ತೀಚೆಗೆ ಬಿಡುಗಡೆಯಾಗಿದ್ದರು. ಆದರೆ ಎರಡನೇ ಪ್ರಕರಣದಲ್ಲಿ ಮುರುಘಾ ಶರಣರಿಗೆ ಜಿಲ್ಲಾ ನ್ಯಾಯಾಲಯ ಜಾಮೀನುರಹಿತ ಬಂಧನಕ್ಕೆ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಪೊಲೀಸರು ಶರಣರನ್ನು ಬಂಧಿಸಿದ್ದಾರೆ.