ಮುರುಘಾ ಶ್ರೀಗೆ ಮತ್ತೆ ಸೆಪ್ಟೆಂಬರ್ 14ರವರೆಗೆ ನ್ಯಾಯಾಂಗ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಪೋಕ್ಸೋ ಕಾಯ್ದೆಯಡಿ ಬಂಧನಕ್ಕೀಡಾಗಿರುವ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶ್ರೀಗಳನ್ನು ನ್ಯಾಯಾಲಯ ಸೆಪ್ಟೆಂಬರ್ 14ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದೆ.

ಮುರುಘಾ ಶ್ರೀ ಅವರನ್ನು ಭಾನುವಾರ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಇಂದು ಪೊಲೀಸರು ಶ್ರೀಗಳನ್ನು ಜೆಎಂಎಫ್‍ಸಿ ಕೋರ್ಟ್‌ಗೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ಕೋರ್ಟ್‌ ಸೆ. 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಇದಕ್ಕೂ ಮೊದಲು ತನಿಖಾಧಿಕಾರಿ ಡಿವೈಎಸ್ಪಿ ಅನಿಲ್ ಕುಮಾರ್ ನೇತೃತ್ವದಲ್ಲಿ ಶ್ರೀಗಳ ವಿಚಾರಣೆ ಮಾಡಿದರು. ಚಿತ್ರದುರ್ಗ ಜಿಲ್ಲಾ 2ನೇ ಅಪರ ಮತ್ತು ಸತ್ರ ನ್ಯಾಯಾಲಯದಲ್ಲಿ ಇಂದು ಪ್ರಕರಣ 3ನೇ ಆರೋಪಿ ಮುರುಘಾಮಠದ ಉತ್ತರಾಧಿಕಾರಿ (ಬಾಲಪರಾಧಿ) ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದು, ನಿರೀಕ್ಷಣಾ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡಲಾಗುತ್ತದೆ.

ಪೊಲೀಸರು ನಿನ್ನೆ ಮಠಕ್ಕೆ ಸ್ವಾಮೀಜಿಯನ್ನ ಕರೆದೊಯ್ದು ಸ್ಥಳ ಮಹಜರು ಮಾಡಿದರು. ಇಂದು ಶ್ರೀಗಳ ನಾಲ್ಕನೇ ದಿನದ ಕಸ್ಟಡಿ ಅಂತ್ಯ ಹಿನ್ನೆಲೆ 11 ಗಂಟೆಗೆ ಶ್ರೀಗಳ ಕಸ್ಟಡಿ ಮುಗಿಯಲಿದ್ದು, ಅಷ್ಟರಲ್ಲಿ ಶ್ರೀಗಳನ್ನ ಮತ್ತೊಂದು ರೌಂಡ್ ವಿಚಾರಣೆ ಸಾಧ್ಯತೆ ಇದೆ. ಈಗಾಗಲೇ ಇಷ್ಟು ದಿನದ ತನಿಖಾ‌ ವರದಿಯನ್ನ ನ್ಯಾಯಾಲಯಕ್ಕೆ ಸಲ್ಲಿಸಲಿರುವ ಪೊಲೀಸರು, ಪ್ರಾಥಮಿಕ ತನಿಖಾ ವರದಿ ಸಮೇತ ಶ್ರೀಗಳನ್ನ ಕೋರ್ಟ್​ಗೆ ಹಾಜರುಪಡಿಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!