ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೈಂಗಿಕ ಕಿರುಕುಳ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶರಣರು ಸಲ್ಲಿಸಿರುವ ಜಾಮೀನು ಅರ್ಜಿಯ ತೀರ್ಪು ಇಂದು ಪ್ರಕಟವಾಗಲಿದೆ.
ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರ ಪೀಠವು ಇಂದು ತೀರ್ಪು ಪ್ರಕಟಿಸಲಿದೆ.
2022ರ ಸೆಪ್ಟೆಂಬರ್ 1ರಿಂದ ಜೈಲು ಪಾಲಾಗಿರುವ ಮುರುಘಾಶ್ರೀ ಅವರ ಜಾಮೀನು ಅರ್ಜಿಯನ್ನು ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಿರಸ್ಕರಿಸಿತ್ತು. ಹೀಗಾಗಿ ಮುರುಘಾಶ್ರೀ ಪರ ವಕೀಲರು ಹೈಕೋರ್ಟ್ ಮೆಟ್ಟಲೇರಿದ್ದು, ಶ್ರೀಗಳ ಜಾಮೀನು ತೀರ್ಪು ಇಂದು ಹೊರಬೀಳಲಿದೆ.