Wednesday, February 1, 2023

Latest Posts

ಮುರುಘಾಮಠ ಕೇಸ್: ತಲೆಮರೆಸಿಕೊಂಡಿದ್ದ ಸೌಭಾಗ್ಯ ದಾವಣಗೆರೆಯಲ್ಲಿ ಬಂಧನ

ಹೊಸದಿಗಂತ ವರದಿ,ಚಿತ್ರದುರ್ಗ:

ಮುರುಘಾಮಠದ ಶಿವಮೂರ್ತಿ ಶರಣರ ವಿರುದ್ಧ ಪೋಕ್ಸೊ ಕಾಯ್ದೆಯಡಿ ದೂರು ದಾಖಲಿಸಲು ವಿದ್ಯಾರ್ಥಿನಿಯರಿಗೆ ಕುಮ್ಮಕ್ಕು ನೀಡಿದ ಹಾಗೂ ಶಿವಮೂರ್ತಿ ಶರಣರ ವಿರುದ್ಧ ಪಿತೂರಿ ನಡೆಸಿದ ಆರೋಪದ ಮೇಳೆ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್ ಅವರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.
ತಮ್ಮ ಹಾಗೂ ತಮ್ಮ ಪತಿ ಬಸವರಾಜನ್ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಆರೋಪಿ ಸೌಭಾಗ್ಯ ಅವರ ಬಂಧನಕ್ಕೆ ಪೊಲೀಸ್ ತಂಡ ರಚಿಸಲಾಗಿತ್ತು. ದಾವಣಗೆರೆಯಲ್ಲಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬಂಧನದ ಭೀತಿ ಎದುರಿಸುತ್ತಿದ್ದ ಸೌಭಾಗ್ಯ, ನಿರೀಕ್ಷಣಾ ಜಾಮೀನು ಪಡೆಯಲು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಅರ್ಜಿ ವಜಾ ಮಾಡಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸೌಭಾಗ್ಯ ಅವರ ಪತಿ ಎಸ್.ಕೆ.ಬಸವರಾಜನ್, ಶಿಕ್ಷಕ ಬಸವರಾಜೇಂದ್ರ, ಛಾಯಾಗ್ರಾಹಕ ಮಯೂರ ಎಂಬುವರು ಈಗಾಗಲೇ ಬಂಧಿತರಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!