ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗ ಮುರುಘಾ ಮಠದ ಡಾ. ಶಿವಮೂರ್ತಿ ಶರಣ ಸ್ವಾಮೀಜಿಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿದೆ. ಆದರೆ, ಚಿತ್ರದುರ್ಗಕ್ಕೆ ಹೋಗದಂತೆ ಷರತ್ತು ಹಾಕಲಾಗಿದೆ.
ಚಿತ್ರದುರ್ಗ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಪೀಠಾಧ್ಯಕ್ಷ ಶ್ರೀ ಶಿವಮೂರ್ತಿ ಮುರುಘ ಶರಣರ ಮೇಲೆ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ವಿಚಾರಣೆ ಮಾಡಿದ ನ್ಯಾಯಾಲಯ ಜೈಲು ಶಿಕ್ಷೆಯನ್ನು ವಿಧಿಸಿತ್ತು.
ಒಟ್ಟು 14 ತಿಂಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ ಮುರುಘಾ ಸ್ವಾಮೀಜಿ ಈಗಾಗಲೇ ಎರಡು ಬಾರಿ ಜಾಮೀನು ಮಂಜೂರಾತಿಗೆ ಹೈಕೋರ್ಟ್‌ಗೆ ಮನವಿ ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ, ವಿಚಾರಣೆಯನ್ನು ಮುಂದೂಡಿಕೆ ಮಾಡುತ್ತಾ ಬಂದಿದ್ದ ನ್ಯಾಯಾಲಯ ಒಂದು ಪ್ರಕರಣದಲ್ಲಿ ಮಾತ್ರ ಜಾಮೀನು ಮಂಜೂರು ಮಾಡಿದೆ.
ಚಿತ್ರದುರ್ಗಕ್ಕೆ ಮುರುಘಾ ಶ್ರೀಗಳಿಗೆ ಪ್ರವೇಶವಿಲ್ಲ ಸೇರಿದಂತೆ 7 ಷರತ್ತುಗಳನ್ನು ವಿಧಿಸಿದೆ. ಜೊತೆಗೆ ಮತ್ತೊಂದು ಪ್ರಕರಣದ ಅರ್ಜಿ ವಿಚಾರಣೆ ಬಾಕಿ ಇರುವುದರಿಂದ ಮುರುಘಾ ಶ್ರೀ ಜೈಲಿನಲ್ಲೇ ಕಾಲ ಕಳೆಯಬೇಕಾಗಿದೆ.